‘ಪೇ-ಸಿಎಂ’ ಪೋಸ್ಟರ್ ಅಂಟಿಸಿದ ಪ್ರಕರಣ: ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರ ವಿರುದ್ಧ ದೂರು ದಾಖಲು

Update: 2022-09-25 08:15 GMT

ಬೆಂಗಳೂರು, ಸೆ.24: ‘ಪೇ-ಸಿಎಂ’ ಪೋಸ್ಟರ್ ಅಂಟಿಸಿದ ಘಟನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಹೈಗ್ರೌಂಡ್ಸ್ ಪೊಲೀಸರು ಎನ್‌ಸಿಆರ್ ದಾಖಲು ಮಾಡಿದ್ದಾರೆ. 

ಶುಕ್ರವಾರ ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಎದುರಿನ ರೇಸ್‌ಕೋರ್ಸ್ ಗೋಡೆಗೆ ಪೇ ಸಿಎಂ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ನಾಯಕರು ಪ್ರತಿಭಟಿಸಿದ್ದರು. ಈ ಹಿನ್ನೆಲೆ ಪೊಲೀಸರು ಎನ್‌ಸಿಆರ್ ದಾಖಲಿಸಿದ್ದಾರೆ.

ಇನ್ನೂ ಪೋಸ್ಟರ್ ಅಂಟಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ಟರ್ಫ್ ಕ್ಲಬ್ ಯಾವುದೇ ದೂರು ನೀಡಿಲ್ಲ. ಅಲ್ಲದೆ, ಶುಕ್ರವಾರ ಕಾಂಗ್ರೆಸ್ ನಾಯಕರು ಪೇ ಸಿಎಂ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಕೈ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದರು. 

ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಹಲವು ನಾಯಕರು ರಸ್ತೆಯಲ್ಲಿ ಗುಂಪು ಸೇರಿ ವಾಹನ ಸಂಚಾರಕ್ಕೂ ಅಡ್ಡಿಪಡಿಸಿದ್ದರು.

ಇದನ್ನೂ ಓದಿ: ವಿರೋಧದ  ನಡುವೆ ಬೆಂಗಳೂರು ವಿವಿ ಆವರಣದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಸಿಂಡಿಕೇಟ್‍ ಸಭೆಯಲ್ಲಿ ಒಪ್ಪಿಗೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News