ಕೆಎಸ್ಸಾರ್ಟಿಸಿ ಸೇರಿದಂತೆ ಸಾರಿಗೆ ನೌಕರರ ವರ್ಗಾವಣೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅ.15ರವರೆಗೆ ಅವಕಾಶ

Update: 2022-09-24 16:19 GMT

ಬೆಂಗಳೂರು, ಸೆ.24: ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ನಿಗಮಗಳಲ್ಲಿ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ 4,665 ನೌಕರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ 1,033 ನೌಕರರು ಸಂಭವನೀಯ ಸಾಮಾನ್ಯ ವರ್ಗಾವಣೆ ಪಟ್ಟಿಯಲ್ಲಿ ಸೇರ್ಪಡೆಯಾಗಿರುತ್ತಾರೆ. ಅದನ್ನು ಪರಿಶೀಲಿಸಿ, ಸಂಭವನೀಯ ವರ್ಗಾವಣೆ ಪಟ್ಟಿಯನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ.

ಸಂಭವನೀಯ ವರ್ಗಾವಣೆ ಪಟ್ಟಿಗೆ ಸಂಬಂಧಿಸಿದಂತೆ ನೌಕರರು ಜ್ಯೇಷ್ಠತೆ ಹಾಗೂ ಇತರೆ ಆಕ್ಷೇಪಣೆ ಇದ್ದಲ್ಲಿ ತಮ್ಮ ವಿಭಾಗದ ಆಡಳಿತಾಧಿಕಾರಿಗಳಿಗೆ ಸೂಕ್ತ ದಾಖಲೆಗಳೊಂದಿಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಲು ಸೆ.24 ರಿಂದ ಅ.15ರವರೆಗೆ ಅವಕಾಶ ಕಲ್ಪಿಸಲಾಗಿದೆ. ನಂತರ ಬಂದ ಯಾವುದೇ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಇಲಾಖೆ ವೆಬ್‍ಸೈಟ್ https://ksrtc.karnataka.gov.in/ ಟಿನಲ್ಲಿ ಸಂಪರ್ಕಿಸಬಹುದು ಎಂದು ಕೆಎಸ್ಸಾರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News