ಬೆಂಗಳೂರು: ಮೃತಪಟ್ಟ ಸ್ಥಿತಿಯಲ್ಲಿ ಕೆಡೆಟ್ ಟ್ರೈನಿ ಪತ್ತೆ, ಆರು ವಾಯುಪಡೆ ಅಧಿಕಾರಿಗಳ ವಿರುದ್ಧ ಕೊಲೆ ಆರೋಪ

Update: 2022-09-25 06:42 GMT
Photo:NDTV

ಬೆಂಗಳೂರು: ಬೆಂಗಳೂರಿನಲ್ಲಿ 27 ವರ್ಷದ ಕೆಡೆಟ್ ಟ್ರೈನಿಯೊಬ್ಬರು ಕಾಲೇಜು ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆಯಾದ (Air Force Cadet Found Dead)ಹಿನ್ನೆಲೆಯಲ್ಲಿ ಆರು ವಾಯುಪಡೆ ಅಧಿಕಾರಿಗಳ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಲಹಳ್ಳಿಯ ಏರ್ ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ (ಎಎಫ್‌ಟಿಸಿ) ಶನಿವಾರ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಅವರ ವಿರುದ್ಧ ನ್ಯಾಯಾಲಯದ ವಿಚಾರಣೆಗೆ ಆದೇಶಿಸಿದ ನಂತರ ಕೆಡೆಟ್ ಟ್ರೈನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕೆಡೆಟ್ ಟ್ರೈನಿ ಅಂಕಿತ್ ಕುಮಾರ್ ಝಾ ಅವರು ತಮ್ಮ ಆತ್ಮಹತ್ಯೆ ಪತ್ರದಲ್ಲಿ ಏರ್ ಕಮೋಡೋರ್, ವಿಂಗ್ ಕಮಾಂಡರ್ ಮತ್ತು ಗ್ರೂಪ್ ಕ್ಯಾಪ್ಟನ್ ಹುದ್ದೆಗಳನ್ನು ಹೊಂದಿರುವ ಅಧಿಕಾರಿಗಳನ್ನು ಉಲ್ಲೇಖಿಸಿದ್ದಾರೆ.

ಅಂಕಿತ್ ಝಾ ಕಾಲೇಜು ಕ್ಯಾಂಪಸ್‌ನಲ್ಲಿ ನಿರಂತರ ಕಿರುಕುಳ ಮತ್ತು ಚಿತ್ರಹಿಂಸೆ ಎದುರಿಸುತ್ತಿದ್ದ ಎಂದು ಝಾ ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ತನಿಖಾಧಿಕಾರಿಗಳ ಪ್ರಕಾರ, ಅಂಕಿತ್ ಝಾ ಅವರ ವಿರುದ್ಧ ಶಿಸ್ತು ಕ್ರಮವನ್ನು ಆರಂಭಿಸಿದ ನಂತರ ಅವರನ್ನು  ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News