ಗಾಂಧಿನಗರ ಶಾಲೆಗೆ ಮೂರು ಕೊಠಡಿ ಮಂಜೂರು: ಶಾಸಕ ವೇದವ್ಯಾಸ ಕಾಮತ್

Update: 2022-09-25 12:03 GMT

ಮಂಗಳೂರು, ಸೆ.25; ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಗಾಂಧಿ ನಗರ ಹಿರಿಯ ಪ್ರಾಥಮಿಕ  ಮೂರು ಕೊಠಡಿ ಗಳನ್ನು  ಮಂಜೂರಾತಿ ಯಾಗಿದೆ ಎಂದು ಮಂಗ ಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಅವರು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ದಾನಿಗಳು ಸಹಕಾರ ದಿಂದ ನೀಡಿದ ಮೂರು ಸ್ಟೀಲ್ ಕಪಾಟುಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಗಾಂಧಿ ನಗರ ಹಿರಿಯ ಪ್ರಾಥಮಿಕ  ಶಾಲೆಗೆ ಶನಿವಾರ ಹಸ್ತಾಂತರ ಮಾಡಿ ಮಾತನಾಡುತ್ತಿದ್ದರು.

ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರು ಮಹಾನಗರ ಪಾಲಿಕೆ ಯ ವ್ಯಾಪ್ತಿಯಲ್ಲಿ ಶಾಲೆಗಳು ಸೇರಿದಂತೆ ವಿವಿಧ ಕಡೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ  ಹೆಚ್ಚಿನ ಒತ್ತು ನೀಡಲಾಗುತ್ತಿದೆ. ನಗರದ ಸರ್ವಾಂಗೀಣ ಅಭಿವೃದ್ಧಿ ಯನ್ನು ಸಂಘ ಸಂಸ್ಥೆ ಗಳ ಸಹಭಾಗಿತ್ವದಲ್ಲಿ ಮಾಡುವ ಗುರಿಹೊಂದಿರುವುದಾಗಿ ಅವರು ತಿಳಿಸಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ, ಜಿಲ್ಲಾ ಕಾರ್ಯ ಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಹಾಗೂ ಪದಾಧಿಕಾ ರಿಗಳು ಶಾಲಾ ಮುಖ್ಯೋಪಾಧ್ಯಾಯಿನಿ ಯಶೋಧ ದ.ಕ.ಜಿ.ಪಂ. ಉನ್ನತೀಕ ರಿಸಿದ ಹಿ.ಪ್ರಾ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೀಪಕ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮನೋಜ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News