ಕೆಪಿಸಿಸಿ ಮಾಧ್ಯಮ, ಸಂವಹನ ವಿಭಾಗದ ಕಾರ್ಯದರ್ಶಿಯಾಗಿ ಅಮೃತ್ ಶೆಣೈ ನೇಮಕ
Update: 2022-09-25 19:29 IST
ಉಡುಪಿ, ಸೆ.25: ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಮಾಧ್ಯಮ ಹಾಗೂ ಸಂವಹನ ವಿಭಾಗದ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಆಗಿ ನೇಮಕ ಮಾಡಿ ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ಸಮಿತಿ ರಾಜ್ಯಾಧ್ಯಕ್ಷ ಪ್ರಿಯಾಂಕ ಖರ್ಗೆ ಆದೇಶಿಸಿದ್ದಾರೆ.
ಅದೇ ರೀತಿ ಇವರನ್ನು ಕೆಪಿಸಿಸಿ ವಾರ್ ರೂಮ್‌ನ ಸದಸ್ಯರಾಗಿ ಉಡುಪಿ ಜಿಲ್ಲಾ ಕೋ ಆರ್ಡಿನಟರ್, ಸಂಚಾಲಕರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನೇಮಿಸಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.