ಅಂತ್ಯೋದಯ ಪರಿಕಲ್ಪನೆಗೆ ಸರ್ವಕಾಲಿಕ ಮಹತ್ವ: ಸುರೇಶ್ ನಾಯಕ್

Update: 2022-09-25 14:13 GMT

ಉಡುಪಿ, ಸೆ.25: ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ಜೀವನಾದರ್ಶ ಹಾಗೂ ’ಅಂತ್ಯೋದಯ’ ಪರಿಕಲ್ಪನೆ ಸರ್ವಕಾಲಿಕ ಮಹತ್ವವನ್ನು ಪಡೆದಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ರವಿವಾರ ನಡೆದ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ ಪ್ರಯುಕ್ತ ಪಂಡಿತ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅವರು ಮಾತನಾಡುತಿದ್ದರು.

ಈ ಸಂದರ್ಭದಲ್ಲಿ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಸಲೀಂ ಅಂಬಾಗಿಲು, ಬಿಜೆಪಿ ಜಿಲ್ಲಾ ಕಾಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಗುರ್ಮೆ, ಜಿಲ್ಲಾ ಸಾಮಾಜಿಕ ಜಾಲತಾಣದ ಚಂದ್ರಶೇಖರ್ ಪ್ರಭು, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ, ಪ್ರಮುಖರಾದ ಮೋಹನ ಉಪಾಧ್ಯಾಯ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News