ಕ್ಷಯ ಮುಕ್ತ ಭಾರತ ಅಭಿಯಾನ- ಮಾಹಿತಿ ಶಿಬಿರ

Update: 2022-09-25 14:16 GMT

ಉಡುಪಿ, ಸೆ.25: ಯಾವುದೇ ಒಂದು ಕಾಯಿಲೆಯನ್ನು ಗುಣಪಡಿಸುವ ಬದಲು ಅದು ಬರದಂತೆ ತಡೆಗಟ್ಟುವುದು ಅತ್ಯುತ್ತಮ ವಿಧಾನವಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಯಾವುದೇ ಒಂದು ಕಾಯಿಲೆಯ ಬಗ್ಗೆ ತಿಳಿದುಕೊಂಡು ಅದನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ಉಡುಪಿ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿ ಕಾರಿಗಳ ಕಚೇರಿಯ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.

ಭಾರತೀಯ ಅಂಚೆ ಇಲಾಖೆ ವಿಭಾಗದ ಉಡುಪಿ ಪ್ರಧಾನ ಅಂಚೆ ಕಚೇರಿ ಯಲ್ಲಿ ಸ್ವಚ್ಛತಾ ಪಾಕ್ಷಿಕದ ಅಂಗವಾಗಿ ಆಯೋಜಿಸಲಾದ ಕ್ಷಯರೋಗ ಮುಕ್ತ ಭಾರತ ಅಭಿಯಾನದ ಮಾಹಿತಿ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡು ತಿದ್ದರು.

ಆರೋಗ್ಯ ಇಲಾಖಾ ಕಾರ್ಯಕರ್ತೆ ಸುಮಲತಾ ಉಪಸ್ಥಿತರಿದ್ದರು. ಉಡುಪಿ ಅಂಚೆ ವಿಭಾಗದ ಆಂಚೆ ಅಧೀಕ್ಷಕ ನವೀನ್ ಚಂದ್ರರ್ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠಲ  ಭಟ್  ವಂದಿಸಿದರು. ಉಡುಪಿ ಪ್ರಧಾನ ಅಂಚೆ ಕಚೇರಿಯ ಅಂಚೆಪಾಲಕ ಗುರುಪ್ರಸಾದ್ ಸ್ವಾಗತಿಸಿ ಕಾರ್ಯ ಕ್ರಮ ನಿರೂಪಿಸಿದರು.

ರಕ್ತದಾನ ಶಿಬಿರ: ಸ್ವಚ್ಛತಾ ಪಾಕ್ಷಿಕದ ಅಂಗವಾಗಿ ಅಂಚೆ ಇಲಾಖೆಯ ಉಡುಪಿ ಅಂಚೆ ವಿಭಾಗದ ವತಿಯಿಂದ ರಕ್ತದಾನ ಶಿಬಿರವನ್ನು ಉಡುಪಿ ಅಂಚೆ ಕಚೇರಿ ಯಲ್ಲಿ ಆಯೋಜಿಸಲಾಗಿತ್ತು.

ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ ರಕ್ತದಾನದ ಕುರಿತು ಮಾಹಿತಿ ನೀಡಿದರು.  ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ನವೀನ್ ಚಂದರ್ ಸ್ವಾಗತಿಸಿದರು. ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠಲ ಭಟ್ ವಂದಿಸಿದರು. ಉಡುಪಿ ಪ್ರಧಾನ ಅಂಚೆ ಕಚೇರಿಯ ಅಂಚೆ ಪಾಲಕ ಗುರು ಪ್ರಸಾದ್ ಉಪಸ್ಥಿತರಿದ್ದರು. ಸುಮಾರು ನಲ್ವತ್ತಕ್ಕೂ ಅಧಿಕ ಸಿಬ್ಬಂದಿಗಳು ರಕ್ತದಾನ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News