ಕೊಹ್ಲಿ, ಸೂರ್ಯಕುಮಾರ್ ಅರ್ಧ ಶತಕ; ಭಾರತಕ್ಕೆ ಟಿ20 ಸರಣಿ

Update: 2022-09-25 17:13 GMT

ಹೈದರಾಬಾದ್: ಆಸ್ಟ್ರೇಲಿಯ ವಿರುದ್ಧದ ಸರಣಿಯ ಅಂತಿಮ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ (63) ಮತ್ತು ಸೂರ್ಯಕುಮಾರ್ ಯಾದವ್ (69) ಅವರ ಬ್ಯಾಟಿಂಗ್ ನೆರವಿನಿಂದ 6 ವಿಕೆಟ್ ಗಳ ಗೆಲುವಿನೊಂದಿಗೆ ಭಾರತ ಸರಣಿ ಕೈವಶ ಮಾಡಿಕೊಂಡಿದೆ.

ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯ ತಂಡವು ಕ್ಯಾಮರಾನ್ ಗ್ರೀನ್ ಮತ್ತು ಟಿಮ್ ಡೇವಿಡ್ ಬಿರುಸಿನ ಅರ್ಧಶತಕಗಳ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಿ ಭಾರತದ ಗೆಲುವಿಗೆ 187 ರನ್ ಗುರಿ ನೀಡಿತ್ತು. 

ಭಾರತದ ಪರ ಬ್ಯಾಟಿಂಗ್ ಗೆ ಕೆ.ಎಲ್. ರಾಹುಲ್ ಮತ್ತು ನಾಯಕ ರೋಹಿತ್ ಶರ್ಮಾ ಬೇಗನೇ ವಿಕೆಟ್ ಒಪ್ಪಿಸಿದರು. ನಂತರ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಭಾರತ 2-1 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News