ದಸರಾ ಉದ್ಘಾಟನೆಗೆ ಕ್ಷಣಗಣನೆ; ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Update: 2022-09-26 04:07 GMT

ಮೈಸೂರು: ದಸರಾ ಉದ್ಘಾಟನೆಗೆ ಸೋಮವಾರ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಸ್ವಾಗತಿಸಿ ಬರಮಾಡಿಕೊಂಡರು.

ದೆಹಲಿಯಿಂದ ಏರ್ ಲೈನ್ಸ್ ವಿಮಾನದಲ್ಲಿ ಆಗಮಿಸಿದ ರಾಷ್ಟ್ರಪತಿಗಳನ್ನು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

ಇದೇ ಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು(Draupadi Murmu) ಅವರು ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ.

ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬುಡಕಟ್ಟು ಸಮುದಾಯದವರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನೃತ್ಯದ ಮೂಲಕ ಗಮನ ಸೆಳೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News