ದಸರಾ ಉತ್ಸವ: ಕೆಎಸ್ಸಾರ್ಟಿಸಿಯಿಂದ 2 ಸಾವಿರಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ

Update: 2022-09-26 11:46 GMT

ಬೆಂಗಳೂರು, ಸೆ. 26: ‘ದಸರಾ ಮಹೋತ್ಸ್ಸವದ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ದೇಶದ ವಿವಿಧ ಕಡೆಗಳಿಂದ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು  (Karnataka State Road Transport Corporation) 2ಸಾವಿರಕ್ಕೂ ಹೆಚ್ಚುವ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದೆ.

ಸೆ. 30ರಿಂದ ಅಕ್ಟೋಬರ್ 3ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಗೆ 2ಸಾವಿರಕ್ಕೂ ಹೆಚ್ಚು ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಸದರಿ ವಾಹನಗಳನ್ನು ಕೆಂಪೇಗೌಡ, ಮೈಸೂರು ರಸ್ತೆ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಿವೆ. ನಂತರ ರಾಜ್ಯದ ಮತ್ತುಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.7ರಿಂದ ಅ. 9ರ ವರೆಗೆ ವಿಶೇಷ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು.

ವಿಶೇಷ ಸಾರಿಗೆ ವ್ಯವಸ್ಥೆ: ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 200ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆಆರ್‍ಎಸ್ ಅಣೆಕಟ್ಟು/ಬೃಂದಾವನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 250ಹೆಚ್ಚುವರಿ ಸೇರಿ ಒಟ್ಟಾರೆ 450 ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.

ಇ-ಟಿಕೇಟ್‍ಬುಕಿಂಗ್ ಅನ್ನು https://ksrtc.in/oprs-web/guest/home.do ವೆಬ್‍ಸೈಟ್ ಅಥವಾಮೊಬೈಲ್‍ಮುಖಾಂತರಮಾಡಬಹುದು. ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ಕರಾರಸಾ ನಿಗಮದ  ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು ಮಾಹಿತಿ ಕೇಂದ್ರವನ್ನು ಪ್ರತ್ಯೇಕವಾಗಿ ತೆರೆಯಲಾಗುವುದು.

ನಾಲ್ಕು ಅಥವಾಹೆಚ್ಚುಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟುರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು. ಪ್ರಯಾಣಿಕರುಬಸ್‍ನಿಲ್ದಾಣಗಳಿಗೆ ತೆರಳುವಮುನ್ನಮುಂಗಡವಾಗಿ ಕಾಯ್ದಿರಿಸಲಾಗಿರುವ ಟಿಕೆಟ್‍ಗಳಮೇಲೆನಮೂದಿಸಲಾಗಿರುವಬಸ್‍ನಿಲ್ದಾಣ/ಪಿಕ್‍ಅಪ್ ಪಾಯಿಂಟ್ ಹೆಸರನ್ನು ಗಮನಿಸಬೇಕು' ಎಂದು ಕೆಎಸ್ಸಾರ್ಟಿಸಿ ಪ್ರಕಟನೆ ಕೋರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News