ಗ್ರಾಮ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಆದ್ಯತೆ: ಲುಕ್ಮಾನ್ ಬಂಟ್ವಾಳ್

Update: 2022-09-26 11:48 GMT

ಮಂಗಳೂರು, ಸೆ.26: ಯುವ ಕಾಂಗ್ರೆಸ್ ದ ಕ ಜಿಲ್ಲೆ ಮತ್ತು ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ನರಿಮೊಗರು, ಬಲ್ನಾಡು ಮತ್ತು ಬಪ್ಪಳಿಗೆ ಗ್ರಾಮಗಳಲ್ಲಿ ಯೂತ್ ಜೋಡೊ ಬೂತ್ ಜೋಡೊ ಕಾರ್ಯಕ್ರಮನ್ನು ಆಯೋಜಿಸಿ ಗ್ರಾಮ ಸಮಿತಿ ರಚಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್, ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಮತ್ತು ಸಂಘಟನಾತ್ಮಕವಾಗಿ ತಳ ಮಟ್ಟದಿಂದ ಪಕ್ಷವನ್ನು ಕಟ್ಟುವ ಸಲುವಾಗಿ ಜಿಲ್ಲೆಯ ಪ್ರತಿಯೊಂದು ಗ್ರಾಮಗಳಲ್ಲಿ ಯುವ ಕಾಂಗ್ರೆಸ್ ಗ್ರಾಮ ಸಮಿತಿಗಳನ್ನು ರಚಿಸುವ ಕೆಲಸ ನಡೆಯುತ್ತಿದೆ ಎಂದರು.

ಈಗಾಗಲೇ ಕೇವಲ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯ 40 ಗ್ರಾಮಗಳಲ್ಲಿ ಗ್ರಾಮ ಸಮಿತಿಗಳ ರಚನೆ ಮಾಡಲಾಗಿದ್ದು ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ಯಾತ್ರೆ ಕರ್ನಾಟಕವನ್ನು ಹಾದು ಹೋದ ನಂತರ ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಯೂತ್ ಜೋಡೊ ಬೂತ್ ಜೋಡೊ ಕಾರ್ಯಕ್ರಮನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಸಂಯೋಜಕರಾದ ಹೇಮನಾಥ ಶೆಟ್ಟಿ , ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಪ್ರಸಾದ್ ಪಾಣಾಜೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಅನಿತಾ ಹೇಮನಾಥ ಶೆಟ್ಟಿ, ಎಂ.ಎಸ್ ಮುಹಮ್ಮದ್, ಮಾಜಿ ಸದಸ್ಯರಾದ ಲಾನ್ಸಿ ಮಸ್ಕರೇನಸ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಕೆಪಿಸಿಸಿ ಸಂಯೋಜಕರಾದ ಅಬ್ದುಲ್ ರಹಿಮಾನ್, ರಾಜ್ಯ ಎನ್‌ಎಸ್‌ಯುಐ ಉಪಾಧ್ಯಕ್ಷರಾದ ಫಾರೂಕ್ ಬಯಬೇ, ರವಿಕುಮಾರ್ ಕೊಂಜತಯ, ಕೋ ಆಪರೇಟಿವ್ ಉಪಾಧ್ಯಕ್ಷರಾದ ಹೊನ್ನಪ್ಪ ಪೂಜಾರಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಶೀರ್ ಪರ್ಲಡ್ಕ, ಅನ್ವರ್ ಕಾಸಿಂ ಸಾಲ್ಮರ, ಪಾಪು ಪುರುಷರಕಟ್ಟೆ, ನರಿವೊರು ಪಂಚಾಯತ ಸದಸ್ಯರಾದ ಕಮಲೇಶ್, ವೇದಾಂತ ಸುವರ್ಣ, ಎಸ್.ಸಿ ಘಟಕದ ಅಧ್ಯಕ್ಷರಾದ ಮಲಿಂಗ ನಾಯಕ್, ವಲಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ, ಗಂಗಾಧರ ಶೆಟ್ಟಿ ಎಳಿಕ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಹನೀಫ್ ಪುಂಚತ್ತಾರ್‌ಸ ಇಸ್ಮಾಯಿಲ್ ಬಲ್ನಾಡ್, ವಿಟ್ಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ನಾರಾಯಣ ಗೌಡ, ಸತೀಶ್ ಗೌಡ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News