ಬೆಂಗಳೂರು: ನಾಪತ್ತೆಯಾಗಿದ್ದ ಮೂವರು ಬಾಲಕಿಯರು ಚೆನ್ನೈನಲ್ಲಿ ಪತ್ತೆ

Update: 2022-09-26 11:54 GMT

ಬೆಂಗಳೂರು, ಸೆ.25: ಬೆಂಗಳೂರಿನಿಂದ ಕಾಣೆಯಾಗಿದ್ದ ಮೂವರು ಶಾಲಾ ಬಾಲಕಿಯರು ಚೆನ್ನೈಯಲ್ಲಿ ಪತ್ತೆಯಾಗಿದ್ದು, ಅವರನ್ನು ಇಲ್ಲಿನ ಪುಲಿಕೇಶಿನಗರ ಠಾಣಾ ಪೊಲೀಸರು ನಗರಕ್ಕೆ ಕರೆತಂದಿದ್ದಾರೆ.

ನಗರದ ಖಾಸಗಿ ಶಾಲೆಯೊಂದರಲ್ಲಿ ಮೂವರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದರು. ಇಬ್ಬರು ಶಾಲಾ ಹಾಸ್ಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರೆ ಮತ್ತೋರ್ವ ಬಾಲಕಿ ಮನೆಯಿಂದಲೇ ಶಾಲೆಗೆ ತೆರಳುತ್ತಿದ್ದರು. ಓದುವ ವಿಷಯವಾಗಿ ಮೂವರ ಬಾಲಕಿಯರ ಮನೆಗಳಲ್ಲಿ ಪೋಷಕರು ಒತ್ತಡ ಹೇರಿದ್ದರು ಎನ್ನಲಾಗಿದ್ದು, ಇದರಿಂದ ಅಸಮಾಧಾನಗೊಂಡಿದ್ದ ಬಾಲಕಿಯರು ವ್ಯವಸ್ಥಿತ ಯೋಜನೆ ಹಾಕಿಕೊಂಡು ಯಾರಿಗೂ ಹೇಳದೆ ನಾಪತ್ತೆಯಾಗಿದ್ದರು.

ಪರಿಚಯಸ್ಥರಿಂದ ಸುಮಾರು 21 ಸಾವಿರ ರೂಪಾಯಿ ಹಣ ಸಂಗ್ರಹಿಸಿದ್ದ ಮೂವರು ಸೆ.6 ರಂದು ವಿದ್ಯಾರ್ಥಿ ವಸತಿ ಗೃಹದಿಂದ ಪರಾರಿಯಾಗಿದ್ದರು. ಈ  ನಡುವೆ ನಾಪತ್ತೆಯಾಗಿದ್ದ ಮೂವರಲ್ಲಿ ಓರ್ವಳು ಸ್ನೇಹಿತೆಗೆ ಕರೆ ಮಾಡಿ ಮಾತನಾಡಿದ್ದಳು. ಈ ಬಗ್ಗೆಸ್ನೇಹಿತೆ ಪೊಲೀಸರಿಗೆ ಮಾಹಿತಿ ನೀಡಿದ್ದಳು. ಇದರಂತೆ ಕಾರ್ಯಾಚರಣೆ ಕೈಗೊಂಡು ಪೊಲೀಸರು ನಗರಕ್ಕೆ ಕರೆತಂದಿದ್ದಾರೆ. 

ವೈದ್ಯಕೀಯ ಪರೀಕ್ಷೆ ಬಳಿಕ ಮೂವರು ಅಪ್ರಾಪ್ತೆಯರನ್ನು ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News