ಆಳ್ವಾಸ್ ನುಡಿಸಿರಿ 2022- ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳಿಗೆ ಆಹ್ವಾನ

Update: 2022-09-26 12:29 GMT

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಯು ಡಿ. 21, 22 ಹಾಗೂ 23.ರಂದು ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆಯಲಿದೆ.

ಇದೇ ಸಮಯದಲ್ಲಿ ಸ್ಕೌಟ್ಸ್ ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯು ಡಿ. 21ರಿಂದ 27ರವರೆಗೆ ಪುತ್ತಿಗೆ ವಠಾರದಲ್ಲಿ ನಡೆಯಲಿದ್ದು, ಇದರಲ್ಲಿ ರಾಜ್ಯ, ರಾಷ್ಟ್ರ ಮತ್ತು ವಿದೇಶಗಳ 50 ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಎರಡು ಬೃಹತ್ ಕಾರ್ಯಕ್ರಮಗಳ ಸಂದರ್ಭದಲ್ಲಿ ಅಭೂತಪೂರ್ವ ಪುಸ್ತಕದ ಮಾರಾಟ ಮತ್ತು ಪ್ರದರ್ಶನವನ್ನು ಆಯೋಜಿಸಲಾಗುತ್ತಿದೆ. ಇದಕ್ಕಾಗಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಆಹ್ವಾನಿಸುತ್ತಿದ್ದೇವೆ.

ಸ್ಕೌಟ್ಸ್ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯಲ್ಲಿ ದೇಶ-ವಿದೇಶಗಳ ವಿದ್ಯಾರ್ಥಿಗಳು ಪ್ರತಿನಿಧಿಗಳಾಗಿರುವುದರಿಂದ ಕನ್ನಡ ಪುಸ್ತಕಗಳ ಜೊತೆಗೆ ದೇಶೀಯ, ಪ್ರಾಂತೀಯ ಭಾಷೆಗಳ ಪುಸ್ತಕಗಳೂ ಮಳಿಗೆಯಲ್ಲಿರಬೇಕಾದುದು ಅಗತ್ಯವಾಗಿದೆ. ಮಾತ್ರವಲ್ಲ ಆಳ್ವಾಸ್ ನುಡಿಸಿರಿಯಲ್ಲಿ ಭಾಗವಹಿಸುವ ಪುಸ್ತಕ ಮಳಿಗೆಗಳು ಡಿ. 21ರಿಂದ 27ರವರೆಗೆ ಪ್ರದರ್ಶನ ಮೇಳದಲ್ಲಿ ಇರಬೇಕಾದ ಅನಿವಾರ್ಯತೆ ಇದೆ. 7 ದಿನಗಳು ಇರುವ  ಮಳಿಗೆಗಳನ್ನು ಪ್ರಥಮ ಪ್ರಾಶಸ್ತ್ಯದ ಮಳಿಗೆಗಳಾಗಿ ಪರಿಗಣಿಸಲಾಗುತ್ತದೆ. ವಸತಿ ಮತ್ತು ಊಟೋಪಚಾರಗಳನ್ನು ಉಚಿತವಾಗಿ ನೀಡಲಾಗುವುದು. ಮಳಿಗೆಗಳನ್ನು ಕಾಯ್ದಿರಿಸಲು ನಿಗದಿತ ಶುಲ್ಕದೊಂದಿಗೆ 15.11.2022ರ ಒಳಗೆ ಪತ್ರವನ್ನು ಕಳುಹಿಸಿಕೊಡುವಂತೆ ಕೇಳಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಾ.ಯೋಗೀಶ್ ಕೈರೋಡಿ (9845704371), ಅಂಬರೀಷ ಚಿಪ್ಳೂಣ್ಕರ್ ಎಂ.(9845882048) ಸಂಪರ್ಕಿಸಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ.ಮೋಹನ ಆಳ್ವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News