ಪರಿವರ್ತಿತ ಭೂಮಿ ಷರತ್ತು ಉಲ್ಲಂಘನೆ ವಿರುದ್ಧ ಕ್ರಮ ಜರುಗಿಸುವ ಅಧಿಕಾರ ಡಿಸಿಗೆ ಮಾತ್ರ: ಹೈಕೋರ್ಟ್

Update: 2022-09-26 12:48 GMT

ಬೆಂಗಳೂರು, ಸೆ.26: ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಹೊರಡಿಸಿದ ಆದೇಶದಲ್ಲಿನ ಯಾವುದೇ ಷರತ್ತು ಉಲ್ಲಂಘನೆಯಾದರೆ ಅಂಥ ಕೇಸ್‍ನಲ್ಲಿ ಕ್ರಮ ಜರುಗಿಸುವ ಅಧಿಕಾರ ಡಿಸಿಗೆ ಮಾತ್ರ ಇರಲಿದೆ ಎಂದು ಹೈಕೋರ್ಟ್ ಆದೇಶಿಸಿದೆ. 

ಕೈಗಾರಿಕೆ ಉದ್ದೇಶಕ್ಕೆ ಮೀಸಲಿಟ್ಟಿದ್ದ ಜಾಗದಲ್ಲಿ ನಿರ್ಮಿಸಿದ್ದ ವಸತಿ ಕಟ್ಟಡ ತೆರವುಗೊಳಿಸುವಂತೆ ಬೆಂಗಳೂರು ಪೂರ್ವ ತಹಶೀಲ್ದಾರ್ ನೀಡಿದ್ದ ನೋಟಿಸ್ ರದ್ದುಪಡಿಸುವಂತೆ ಕೋರಿ ಮೆ.ಶ್ರೇನೋ ಲಿಮಿಟೆಡ್ ಕಂಪೆನಿ ಸಲ್ಲಿಸಿದ್ದ ಅರ್ಜಿ ಮಾನ್ಯ ಮಾಡಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ಮಾಡಿದೆ.

ಭೂ ಸುಧಾರಣಾ ಕಾಯ್ದೆ-1964ರ ಸೆಕ್ಷನ್ 95ರ ಅಡಿಯಲ್ಲಿ ಭೂ ಪರಿವರ್ತನೆಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಹೊರಡಿಸಿದ ಆದೇಶದಲ್ಲಿ ಯಾವುದೇ ಷರತ್ತು ಉಲ್ಲಂಘನೆಯಾದರೆ, ಇಲ್ಲವೇ ಕಾಯ್ದೆಯ ಸೆಕ್ಷನ್ 94 ಮತ್ತು 104 ಅಡಿ ಅನಧಿಕೃತ ಸ್ವಾಧೀನ ಮಾಡಿಕೊಂಡಿದ್ದರೆ ತೆರವಿಗೆ ಕ್ರಮ ಜರುಗಿಸುವ ಅಧಿಕಾರ ಜಿಲ್ಲಾಧಿಕಾರಿಗೆ ಮಾತ್ರ ಇರುತ್ತದೆ. ಈ ಸೆಕ್ಷನ್ ಅಡಿಯಲ್ಲಿ ಕ್ರಮ ಜರುಗಿಸಲು ತಹಶೀಲ್ದಾರ್‍ಗೆ ಅಧಿಕಾರ ಇಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿರುವ ಹೈಕೋರ್ಟ್ ನ್ಯಾಯಪೀಠ, ಕಂಪೆನಿಗೆ ತಹಶೀಲ್ದಾರ್ ನೀಡಿದ್ದ ನೋಟಿಸ್ ರದ್ದುಪಡಿಸಿದೆ.

ಇದನ್ನೂ ಓದಿ: ಕಾರು ಕಳವು ಪ್ರಕರಣ: ದಂಪತಿ ಬಂಧನ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News