×
Ad

ಉಡುಪಿ: ಸೆ. 27ರಂದು ಅಲ್ಲಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Update: 2022-09-26 19:32 IST

ಉಡುಪಿ, ಸೆ. 26: ಜಿಲ್ಲೆಯಲ್ಲಿ ಸೆ.27ರಂದು ಈ ಕೆಳಕಂಡ ಕಡೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ  ತಿಳಿಸಿದೆ.

ಉಡುಪಿಯ 110/33/11 ಕೆವಿ ನಿಟ್ಟೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಬನ್ನಂಜೆ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿ ಕೊಂಡಿರುವುದರಿಂದ ಬ್ರಹ್ಮಗಿರಿ, ಕಾನ್ವೆಂಟ್ ರಸ್ತೆ, ಕಾಡಬೆಟ್ಟು, ಪ್ರಗತಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ, 110/11ಕೆ ನಿಟ್ಟೂರು ಉಪ ವಿದ್ಯುತ್ ಕೇಂದ್ರದಿಂದ ಹೊರಡುವ 11ಕೆವಿ ಕಲ್ಯಾಣಪುರ, ಶಾಂತಿವನ ಮತ್ತು ಪುತ್ತೂರು ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿ ಕೊಂಡಿರುವುದರಿಂದ ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಗೋಪಾಲಪುರ, ಶಾಂತಿವನ, ಗರಡಿ ಮಜಲು, ಪುತ್ತೂರು, ಅಂಬಾಗಿಲು, ಪೆರಂಪಳ್ಳಿ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಕಾರ್ಕಳದ 220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ ಹಾಗೂ 110/11ಕೆವಿ ಕಾರ್ಕಳ ಉಪಕೇಂದ್ರದಿಂದ ಹೊರಡುವ ಪದವು ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರು ವುದರಿಂದ  ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಫ್ಲೈ, ಬೊರ್ಗಲ್‌ಗುಡ್ಡೆ, ಲೆಮಿನಾ ಇಂಡಸ್ಟ್ರೀಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬೇಲಾಡಿ, ಬಾರಾಡಿ ಕಲ್ಯಾ, ಬೋಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9:30 ರಿಂದ ಸಂಜೆ 5:30ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕೆಎಂಎಫ್ ಫೀಡರಿನಲ್ಲಿ ಹಾಗೂ 110/33/11ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಪೆರ್ಡೂರು ಫೀಡರಿನಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿ ಕೊಂಡಿರುವುದರಿಂದ ಈಶ್ವರನಗರ, ಸರಳೇಬೆಟ್ಟು, ಅರ್ಬಿ, ಪ್ರಗತಿನಗರ, 80 ಬಡಗುಬೆಟ್ಟು, ಪುತ್ತಿಗೆ, ಪಕ್ಕಾಲು, ಪೆರ್ಡೂರು ಪೇಟೆ, ಮುತ್ತೂರ್ಮೆ, ಕುಕ್ಕೆಹಳ್ಳಿ, ಪಾಡಿಗಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಹೆಬ್ರಿಯ ಬೆಳೆಂಜೆ 33/11 ಕೆವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11ಕೆವಿ ಬೇಳೆಂಜೆ ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೇಳೆಂಜೆ, ಮಡಾಮಕ್ಕಿ, ಕಾಸನಮಕ್ಕಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News