​ಮಂಗಳೂರು: ಖಾಸಗಿ ಆಸ್ಪತ್ರೆಯ ಡೀನ್ ನಾಪತ್ತೆ

Update: 2022-09-26 16:07 GMT

ಮಂಗಳೂರು, ಸೆ.26: ನಗರದ ಖಾಸಗಿ ಆಸ್ಪತ್ರೆಯೊಂದರ ಡೀನ್ ಆಗಿ ಸೇವೆ ಸಲ್ಲಿಸುತ್ತಿರುವ ಡಾ. ಉರ್ಬನ್ ಡಿಸೋಜ ಎಂಬವರು ಸೆ.25ರಿಂದ ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೊರಗೆ ಹೋಗಿ ಬರುತ್ತೇನೆಂದು ಪತ್ನಿಯ ಬಳಿ ಹೇಳಿ ತನ್ನ ದ್ವಿಚಕ್ರ ವಾಹನದಲ್ಲಿ ತೆರಳಿರುವ ಅವರು ರಾತ್ರಿಯಾದರೂ ಮನೆಗೆ ಬರಲಿಲ್ಲ. ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್ಡ್ ಆಫ್ ಆಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News