×
Ad

ರಾಜ್ಯ ಸರಕಾರದ ಭ್ರಷ್ಟಾಚಾರ ವಿರುದ್ಧ ಪೇಸಿಎಂ ಅಭಿಯಾನ

Update: 2022-09-26 21:32 IST

ಉಡುಪಿ, ಸೆ.26: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರದ ವಿರುದ್ಧ ಪೇಸಿಎಂ ಅಭಿಯಾನವನ್ನು ಸೆ.26ರಂದು ನಗರದ ಕರಾವಳಿ ಬೈಪಾಸ್ ಬಳಿಯ ಫ್ಲೈಓವರ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಫ್ಲೈಓವರ್‌ನಲ್ಲಿ ಪೇಸಿಎಂ ಸ್ಟಿಕ್ಟರ್ ಅಂಟಿಸಿ, ಬಿಜೆಪಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಅಜಿತ್ ಹೆಗ್ಡೆ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಸುರಯ್ಯ ಅಂಜುಮ್, ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ, ಕಾಪು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೇನ್,  ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವಿರಾಜ್, ಉಪಾಧ್ಯಕ್ಷ ಅಮದ್, ಕೇಶವ ಸಾಲ್ಯಾನ್, ಆಕಾಶ್ ಪೂಜಾರಿ, ಪ್ರಕಾಶ್ ಕುಂದರ್, ಅನೀಶ್, ಪ್ರಭಾಕರ ಆಚಾರ್ಯ, ಸಾಯಿ ರಾಜ್, ಶರತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News