ಬಾಲಕಿಯ ಅತ್ಯಾಚಾರ, ವೇಶ್ಯಾವಾಟಿಕೆಗೆ ತಳ್ಳಿದ ಆರೋಪ: ಬಿಜೆಪಿ ಕಾರ್ಯಕರ್ತ ಸೇರಿದಂತೆ 13 ಮಂದಿಗೆ ಜೀವಾವಧಿ ಶಿಕ್ಷೆ

Update: 2022-09-27 06:31 GMT

ಚೆನ್ನೈ: ಹದಿಹರೆಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ವೇಶ್ಯಾವಾಟಿಕೆಗೆ ತಳ್ಳಿದ ಆರೋಪದಲ್ಲಿ 8 ಮಂದಿಗೆ ಪೋಕ್ಸೊ ನ್ಯಾಯಾಲಯ POCSO court  ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್, ಬಿಜೆಪಿ ಕಾರ್ಯಕರ್ತ ಹಾಗೂ  ಪತ್ರಕರ್ತ ಸೇರಿದಂತೆ 13 ಜನರಿಗೆ ತಲಾ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. .

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 15 ರಂದು ಎಲ್ಲಾ 21 ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿತು.

ಜೈಲು ಶಿಕ್ಷೆ ಜತೆಗೆ ಸಂತ್ರಸ್ತರಿಗೆ  5 ಲಕ್ಷ ರೂ. ಪರಿಹಾರ ನೀಡುವಂತೆ ಸರಕಾರಕ್ಕೆ ನ್ಯಾಯಾಲಯ ಸೂಚಿಸಿದೆ. 21 ಮಂದಿಗೆ ವಿಧಿಸಿರುವ ದಂಡದ ಮೊತ್ತ  2 ಲಕ್ಷ ರೂ.ವನ್ನು ಸಂತ್ರಸ್ತೆಗೂ ನೀಡಬೇಕು ಎಂದು ನ್ಯಾಯಾಧೀಶರು ಹೇಳಿದರು.

ಜೀವಾವಧಿ ಶಿಕ್ಷೆಗೊಳಗಾದವರಲ್ಲಿ ಸಂತ್ರಸ್ತೆಯ ಮಲತಂದೆ ಹಾಗೂ  ಮಲತಾಯಿ ಸೇರಿದ್ದಾರೆ. ಅಮಾನತುಗೊಂಡ ಇನ್ಸ್‌ಪೆಕ್ಟರ್ ಸಿ ಪುಗಲೇಂಧಿ, ಬಿಜೆಪಿ ಕಾರ್ಯಾಧ್ಯಕ್ಷ ಜಿ. ರಾಜೇಂದ್ರನ್ ಹಾಗೂ  ಖಾಸಗಿ ಮಿಡಿಯಾ ಚಾನೆಲ್‌ನಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತ ವಿನೋಬಾಜಿ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದವರಲ್ಲಿ ಸೇರಿದ್ದಾರೆ.

ಸಂತ್ರಸ್ತೆಯ ತಾಯಿಯ ದೂರಿನ ಮೇರೆಗೆ ವಾಷರ್‌ಮೆನ್‌ಪೇಟೆಯ ಮಹಿಳಾ ಪೊಲೀಸರು 26 ಜನರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ ಹಾಗೂ  560 ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್ ಅನ್ನು ನವೆಂಬರ್, 2020 ರಲ್ಲಿ ಸಲ್ಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News