ಬಸ್‌ಗಳಲ್ಲಿ ​ವಾರದೊಳಗೆ ಕನ್ನಡದಲ್ಲಿ ನಾಮಫಲಕ ಕಡ್ಡಾಯ: ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ

Update: 2022-09-27 14:23 GMT
ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು, ಸೆ.27: ಮಂಗಳೂರು-ಉಡುಪಿ-ಮಣಿಪಾಲ ರೂಟಿನ ಬಸ್‌ಗಳಲ್ಲಿ ಇಂಗ್ಲಿಷ್‌ನೊಂದಿಗೆ ಕನ್ನಡದಲ್ಲಿ ನಾಮಫಲಕವನ್ನು ಅಳವಡಿಸುವಂತೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.

ಈ ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಬಸ್ಸುಗಳಲ್ಲಿ 7 ದಿನದೊಳಗಾಗಿ ಇಂಗ್ಲಿಷ್ ಜೊತೆಗೆ ಕಡ್ಡಾಯವಾಗಿ ಕನ್ನಡದಲ್ಲಿಯೂ ಸ್ಥಳ ಸೂಚಕ ನಾಮಫಲಕ ಹಾಕುವಂತೆ ನಿರ್ದೇಶನ ನೀಡಲಾಗಿದೆ. ತಪ್ಪಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News