ಶಿವಾನಂದ ಮೇಲ್ಸೇತುವೆ ಕಳಪೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ: ಆಪ್ ಮುಖಂಡರ ವಿರುದ್ಧ ಕೋರ್ಟ್ ನಿಂದ ಸಮನ್ಸ್ ಜಾರಿ

Update: 2022-09-27 16:02 GMT

ಬೆಂಗಳೂರು, ಸೆ.27: ಬೆಂಗಳೂರಿನ ಶಿವಾನಂದ ವೃತ್ತದ ಸ್ಟೀಲ್ ಬ್ರಿಡ್ಜ್‍ನ ಕಳಪೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಆಮ್ ಆದ್ಮಿ ಪಕ್ಷದ 18 ಮುಖಂಡರ ವಿರುದ್ಧ ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿ, ನಗರದ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.    

ಶಿವಾನಂದ ಮೇಲ್ಸೇತುವೆಯಲ್ಲಿ ಹಲವು ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ ಆ.29, 2022ರಂದು ಆಮ್ ಆದ್ಮಿ ಪಾರ್ಟಿ ಮುಖಂಡರು '40 ಪರ್ಸೆಂಟ್ ಕಮಿಷನ್ ಮೇಲ್ಸೇತುವೆ' ಹೆಸರಿನಲ್ಲಿ ವಿನೂತನ ಪ್ರತಿಭಟನೆ ನಡೆಸಿದ್ದರು. 

ಇದರಲ್ಲಿ ಭಾಗವಹಿಸಿದ್ದ ಕರ್ನಾಟಕ ಆಮ್ ಆದ್ಮಿ ಪಕ್ಷದ ಮುಖಂಡರಾದ ಮೋಹನ್ ದಾಸರಿ, ಜಗದೀಶ್ ವಿ ಸದಂ, ಸುರೇಶ್ ರಾಥೋಡ್, ಕುಶಲ ಸ್ವಾಮಿ, ಚನ್ನಪ್ಪಗೌಡ ನೆಲ್ಲೂರು, ಉಷಾ ಮೋಹನ್, ಶಾಶಾವಲಿ ಸೇರಿ ಒಟ್ಟು 18 ನಾಯಕರ ವಿರುದ್ಧ ಸಮನ್ಸ್ ಜಾರಿಯಾಗಿದೆ.   

''ಸರಕಾರದಿಂದ ಪೊಲೀಸ್ ಇಲಾಖೆ ದುರ್ಬಳಕೆ''

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಕಾರದ ಅವ್ಯವಹಾರದ ವಿರುದ್ಧ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ಬಿಜೆಪಿ ಸರಕಾರವು ಪೆÇಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವದ ಕತ್ತು ಹಿಸುಕುವ ಪ್ರಯತ್ನ ಮಾಡುತ್ತಿದೆ ಹಾಗೂ ಪ್ರಕರಣ ದಾಖಲಿಸಿ, ಸಮನ್ಸ್ ಜಾರಿ ಮಾಡಿದರೆ ಬೆದರಲ್ಲ ಎಂದು ಎಎಪಿ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News