ಹಲವು ದಿನಗಳ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡ ಚೀನಾ ಅಧ್ಯಕ್ಷ: ಬಂಧನ ಕುರಿತ ವದಂತಿಗಳಿಗೆ ತೆರೆ

Update: 2022-09-27 18:14 GMT
Photo: Twitter

ಬೀಜಿಂಗ್‌: ಸೆ.16ರಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿದ್ದ ಚೀನಾ(China) ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌(Xi Jinping) ಮಂಗಳವಾರ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಮೂಲಕ ಅವರ ಬಂಧನ ಕುರಿತು ಹಬ್ಬಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. 

ಕಮ್ಯುನಿಸ್ಟ್‌ ಪಕ್ಷದ ಕಳೆದೊಂದು ದಶಕದ ಆಡಳಿತ ಸಾಧನೆ ಬಿಂಬಿಸುವ ವಸ್ತುಪ್ರದರ್ಶನಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ ನೀಡಿದ್ದಾರೆ. ಚೀನಾದ ಆಡಳಿತರೂಢ ಕಮ್ಯುನಿಸ್ಟ್‌ ಪಕ್ಷದ ಪ್ರಮುಖ ಅಧಿವೇಶನ ಮುಂದಿನ ತಿಂಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚೀನಾ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ಈ ಪ್ರದರ್ಶನ ನಡೆಸಲಾಗುತ್ತಿದೆ. 

ಹಲವು ದಿನಗಳಿಂದ ಕ್ಸಿ ಜಿನ್ ಪಿಂಗ್ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ್ದರಿಂದ ಅವರ ಗೃಹಬಂಧನವಾಗಿದೆ ಎಂಬ ಸುದ್ದಿಗಳು ವೈರಲ್ ಆಗಿದ್ದವು. ‘ಚೀನಾದಲ್ಲಿ ಸೇನಾ ಕ್ರಾಂತಿ ನಡೆದಿದ್ದು, ಅಧ್ಯಕ್ಷರನ್ನು ಪದಚ್ಯುತಿಗೊಳಿಸಿ ಗೃಹಬಂಧನದಲ್ಲಿರಿಸಲಾಗಿದೆ’ ಎಂಬ ವದಂತಿಗಳು ಇತ್ತೀಚೆಗೆ ವ್ಯಾಪಕವಾಗಿ ಹರಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News