ಬೆಂಗಳೂರಿನಲ್ಲಿ ಅ.2ರವರೆಗೆ ಸಾಧಾರಣ ಮಳೆ: ಹವಾಮಾನ ಇಲಾಖೆ

Update: 2022-09-27 18:25 GMT

ಬೆಂಗಳೂರು, ಸೆ.27: ಹವಾಮಾನದಲ್ಲಿ ಬದಲಾವಣೆಗಳು ಉಂಟಾಗಿದ್ದರಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅ.2ರವರೆಗೆ ಸಾಧಾರಣ ಮಳೆ ಆಗುವ ನಿರೀಕ್ಷೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. 

ಪಶ್ಚಿಮ ಬಂಗಾಳಕೊಲ್ಲಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿದೆ. ಒಡಿಶಾ ಕರಾವಳಿ ಭಾಗದತ್ತ ಈ ಸುಳಿಗಾಳಿ ತೆರಳಲಿದ್ದು, ಬಳಿಕ ದುರ್ಬಲವಾಗಲಿದೆ. ಹವಾಮಾನದ ಈಬದಲಾವಣೆಯಿಂದ ಬೆಂಗಳೂರು ನಗರ ಜಿಲ್ಲೆ ಸೇರಿ ಒಳನಾಡು ಜಿಲ್ಲೆಗಳಲ್ಲಿ ಮಳೆ ವಾತಾವರಣ ಕಂಡು ಬಂದಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ನಾನಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಅ.2ರವರೆಗೆ ಸಾಧಾರಣವಾಗಿ ಮಳೆ ಆಗಲಿದೆ.

ಬೆಳಗಾವಿ, ಹಾವೇರಿ, ಬಾಗಲಕೋಟೆ, ಹಾವೇರಿ, ಗದಗ, ಯಾದಗಿರಿ, ಕೊಪ್ಪಳ ಭಾಗದಲ್ಲಿ ಗುಡುಗುಸಹಿತ ಜೋರು ಮಳೆ ಬೀಳುವ ಸಾಧ್ಯತೆ ಇದೆ. ಹಾಗೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಸಹ ತುಂತುರು ಮಳೆ ಆಗಬಹುದು ಎಂದು ಇಲಾಖೆ ಮಾಹಿತಿ ನೀಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News