ಕೇಂದ್ರ ‌ಸರ್ಕಾರದಿಂದ ಪಿಎಫ್ಐ ನಿಷೇಧ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

Update: 2022-09-28 04:57 GMT

ಬೆಂಗಳೂರು: 'ನಿಷೇಧಿತ ಕೆಎಫ್ ಡಿ ಮತ್ತು ಸಿಮಿ ಸಂಘಟನೆಗಳ ರೂಪಾಂತರಿಯೇ ಈ ಪಿಎಫ್ಐ ಈ ದೇಶದ ಕಾನೂನು ಹಾಗೂ ಸಂವಿಧಾನದ ಮೇಲೆ ನಂಬಿಕೆಯಿಲ್ಲದ ಈ ಸಂಘಟನೆ, ವಿದೇಶಗಳಿಂದ ಬರುವ ಆಜ್ಞೆಯ ಪ್ರಕಾರ ಹಲವಾರು ವಿಧ್ವಂಸಕ ಚಟುವಟಿಕೆಯಲ್ಲಿ ಭಾಗಿಯಾಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

 ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಈ ಸಂಘಟನೆಯನ್ನು ಐದು ವರ್ಷಗಳ ಕಾಲ ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇನೆ. ಈ ಮಹತ್ವದ ಕ್ರಮವನ್ನು ಕೈಗೊಂಡ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ‌' ಎಂದು ತಿಳಿಸಿದ್ದಾರೆ. 

'ಪಿಎಫ್ ಐ ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧ ಪಕ್ಷದವರಾದ ಸಿಪಿಐ, ಕಾಂಗ್ರೆಸ್, ಸಿಪಿಎಂ ಎಲ್ಲರೂ ಕೂಡ ಪಿಎಫ್ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ಇದೀಗ ಕೊನೆಗೂ ಅದೀಗ ಬ್ಯಾನ್ ಆಗಿದೆ'ಎಂದು ಮುಖ್ಯ ಮಂತ್ರಿ ತಿಳಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News