ಬೆಂಗಳೂರು: PFI ರಾಜ್ಯ ಕಚೇರಿ ಬಳಿ ಬಿಗಿ ಭದ್ರತೆ

Update: 2022-09-28 07:36 GMT
ಪಿಎಫ್​ಐ ರಾಜ್ಯ ಪ್ರಧಾನ ಕಚೇರಿ

ಬೆಂಗಳೂರು:  ಮುಂದಿನ ಐದು ವರ್ಷಗಳ ಅವಧಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ನಗರದ ಬೆನ್ಸನ್ ​ಟೌನ್​ನಲ್ಲಿರುವ ಪಿಎಫ್​ಐ ಪ್ರಧಾನ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಚೇರಿ ಸಮೀಪ ಯಾರಿಗೂ ಗುಂಪುಗೂಡಲು ಪೊಲೀಸರು ಅವಕಾಶ ನೀಡುತ್ತಿಲ್ಲ. 

ಇನ್ನು ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಹೆಚ್ಚಿಸಲು ಡಿಜಿ ಮತ್ತು ಐಜಿಪಿ ಪ್ರವೀಣ್​ ಸೂದ್ ಸೂಚನೆ ನೀಡಿದ್ದಾರೆ. 

ಇದನ್ನೂ ಓದಿ: ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಆರೆಸ್ಸೆಸ್ ವಿರುದ್ಧವೂ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ ಆಗ್ರಹ


''ಮುಂಜಾಗ್ರತಾ ಕ್ರಮವಾಗಿ 101 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಸಂಪೂರ್ಣವಾಗಿ ರಾಜ್ಯದಲ್ಲಿ ಜಾರಿಗೆ ತರಲಾಗುವುದು. ರಾಜ್ಯದಲ್ಲಿ ಸದ್ಯ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಕಳೆದೆರಡು ದಿನಗಳಿಂದ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ'' 

- ಪ್ರವೀಣ್ ಸೂದ್, ರಾಜ್ಯ ಪೊಲೀಸ್ ಮಹಾನಿರ್ದೇಶಕರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News