ವಕ್ಫ್‌ ಮಂಡಳಿಯಲ್ಲಿ ಅಕ್ರಮ ನೇಮಕಾತಿ ಪ್ರಕರಣ: ಆಪ್ ಶಾಸಕ ಅಮಾನತುಲ್ಲಾ ಖಾನ್‌ಗೆ ಜಾಮೀನು

Update: 2022-09-28 14:08 GMT
ಅಮಾನತುಲ್ಲಾ ಖಾನ್‌ (File Photo: PTI)

ಹೊಸದಿಲ್ಲಿ: ದಿಲ್ಲಿ ವಕ್ಫ್ ಮಂಡಳಿಯಲ್ಲಿ ಅಕ್ರಮ ನೇಮಕಾತಿ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (AAP)ಶಾಸಕ ಅಮಾನತುಲ್ಲಾ ಖಾನ್(Amanatullah Khan) ಅವರಿಗೆ ಇಂದು ಜಾಮೀನು ಮಂಜೂರು ಮಾಡಲಾಗಿದೆ. ಖಾನ್ ಅವರ ಮನೆ ಮೇಲೆ ದಾಳಿ ನಡೆಸಿದ ಬಳಿಕ ಸೆಪ್ಟೆಂಬರ್ 16 ರಂದು ಭ್ರಷ್ಟಾಚಾರ ನಿಗ್ರಹ ದಳ (ACB) ಅವರನ್ನು ಬಂಧಿಸಿತ್ತು.

ಅವರ ಮನೆಯಲ್ಲಿ ರೂ. 24 ಲಕ್ಷ ನಗದು ಹಾಗೂ ಎರಡು ಅಕ್ರಮ ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಅವರ ಸಂಬಂಧಿಕರು ಮತ್ತು ಬೆಂಬಲಿಗರು ನಿವಾಸದ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.

ದಿಲ್ಲಿ ವಕ್ಫ್ ಮಂಡಳಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಖಾನ್ ಅವರು ಮಾರ್ಗಸೂಚಿಗಳನ್ನು ಉಲ್ಲಂಘಿಸಿ 32 ಜನರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡಿದ್ದಾರೆ ಎಂದು ಎಸಿಬಿ ಆರೋಪಿಸಿದೆ.

ಇದಲ್ಲದೆ, ದಿಲ್ಲಿ ವಕ್ಫ್ ಮಂಡಳಿಯ ಅಧ್ಯಕ್ಷರಾಗಿ, ಖಾನ್ ವಕ್ಫ್ ಮಂಡಳಿಯ ಹಲವಾರು ಆಸ್ತಿಗಳನ್ನು ಅಕ್ರಮವಾಗಿ ಬಾಡಿಗೆಗೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಸಶಸ್ತ್ರ ಸೇನಾ ಪಡೆಗಳ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್(ನಿ.) ಅನಿಲ್ ಚೌಹಾಣ್ ನೇಮಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News