ಉಡುಪಿ: ಶಿಶುಪಾಲನ ಕೇಂದ್ರ ಉದ್ಘಾಟನೆ

Update: 2022-09-28 14:10 GMT

ಉಡುಪಿ, ಸೆ.28: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಮತ್ತು ರೋಟರಿ ಕ್ಲಬ್ ಅಂಬಲಪಾಡಿ ಇವರ ಸಹಯೋಗದಲ್ಲಿ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾರಂಭಿಸಲಾಗಿರುವ ಶಿಶುಪಾಲನಾ ಕೇಂದ್ರವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು.

ಜಿಲ್ಲಾ ಮಹಿಳಾ ಮಂಡಳಿಗಳ ಅಧ್ಯಕ್ಷೆ  ಸರಳಾ ಬಿ. ಕಾಂಚನ್, ಕಾರ್ಯದರ್ಶಿ ವಸಂತಿ ರಾವ್ ಕೊರಡ್ಕಲ್, ರೋಟರಿ ಕ್ಲಬ್ ಅಂಬಲಪಾಡಿ ಅಧ್ಯಕ್ಷ ಭಾಸ್ಕರ ಶೆಟ್ಟಿಗಾರ್, ದಯಾನಿಧಿ ಶೆಟ್ಟಿಗಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವೀಣಾ ವಿವೇಕಾನಂದ, ತಾಲೂಕು ವೈದ್ಯಾಧಿಕಾರಿ ಡಾ.ವಾಸುದೇವ ಉಪದ್ಯಾಯ ಉಪಸ್ಥಿತರಿದ್ದರು.

ಶಿಶುಪಾಲನಾ ಕೇಂದ್ರದ ಶಿಕ್ಷಕಿ ರೇವತಿ ಸ್ವಾಗತಿಸಿದರು. ವಸಂತಿ ರಾವ್ ಕೊರಡ್ಕಲ್ ಪ್ರಾಸ್ತವಿಕ ನುಡಿಗಳನ್ನಾಡಿ ದರು. ಶಿಶುಪಾಲನಾ ಕೇಂದ್ರದ ಸಹಾಯಕಿ ರಾಜೀವಿ ವಂದಿಸಿ, ಮಹಿಳಾ ಶಕ್ತಿ ಕೇಂದ್ರದ ಯೋಜನಾ ಸಂಯೋಜಕಿ ಅನುಷಾ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನೆಗೊಂಡ ಶಿಶುಪಾಲನಾ ಕೇಂದ್ರದ ದೂರವಾಣಿ ಸಂಖ್ಯೆ: 0820-2536394.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News