ಅ.1ಕ್ಕೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ

Update: 2022-09-28 14:12 GMT

ಉಡುಪಿ, ಸೆ.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ವೃದ್ಧಾಶ್ರಮಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಅಕ್ಟೋಬರ್ 1ರಂದು ಬೆಳಗ್ಗೆ 10ಗಂಟೆಗೆ ಎಂ.ಜಿ.ಎಂ. ಕಾಲೇಜಿನ  ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.

ಬೆಳಗ್ಗೆ 9ರಿಂದ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ತಪಾಸಣೆ, ಡೆಂಟಲ್, ಬಿ.ಪಿ ಹಾಗೂ ಶುಗರ್ ತಪಾಸಣೆ ನಡೆಸಲಾಗುವುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News