ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Update: 2022-09-28 14:14 GMT

ಉಡುಪಿ, ಸೆ.28: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿ ಯಿಂದ ಪ್ರಸಕ್ತ ಸಾಲಿನಲ್ಲಿ ನಡೆದ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಹಾಗೂ ೩ಬಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ  ಪುರಸ್ಕಾರಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ ೨೧ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ - https://bcwd.karnataka.gov.in- ವೆಬ್‌ಸೈಟ್, ದೂರವಾಣಿ ಸಂಖ್ಯೆ:0820-2574881, 2573881ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News