ನಿರ್ಮಾಪಕಿ ಏಕ್ತಾ ಕಪೂರ್‌ ವಿರುದ್ಧ ಬಂಧನ ವಾರಂಟ್‌

Update: 2022-09-28 17:34 GMT
ಏಕ್ತಾ ಕಪೂರ್‌ (File Photo: PTI)

ಬೇಗುಸರಾಯ್: ಬಿಹಾರದ ಬೇಗುಸರಾಯ್‌ನ (Begusarai) ನ್ಯಾಯಾಲಯವು, ಚಲನಚಿತ್ರ ನಿರ್ಮಾಪಕಿ ಮತ್ತು ನಿರ್ದೇಶಕಿ ಏಕ್ತಾ ಕಪೂರ್(Ekta Kapoor) ಹಾಗೂ ಅವರ ತಾಯಿ ಶೋಭಾ ಕಪೂರ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ತಮ್ಮ ವೆಬ್ ಸರಣಿ(Web Series) 'XXX-2' ರಲ್ಲಿ ಸೈನಿಕರನ್ನು ಅವಮಾನಿಸಿದ್ದಾರೆ ಹಾಗೂ ಅವರ ಕುಟುಂಬ ಸದಸ್ಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆಂದು ಆರೋಪಿಸಲಾಗಿದೆ.

ಮಾಜಿ ಸೈನಿಕ ಮತ್ತು ಬೇಗುಸರಾಯ್ ನಿವಾಸಿ ಶಂಭು ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ನ್ಯಾಯಾಧೀಶ ವಿಕಾಸ್ ಕುಮಾರ್ ನ್ಯಾಯಾಲಯವು ವಾರಂಟ್ ಹೊರಡಿಸಿದೆ.

'XXX' (ಸೀಸನ್-2) ಸರಣಿಯು ಸೈನಿಕನ ಹೆಂಡತಿಗೆ ಸಂಬಂಧಿಸಿದ ಹಲವಾರು ಆಕ್ಷೇಪಾರ್ಹ ದೃಶ್ಯಗಳನ್ನು ಒಳಗೊಂಡಿದೆ ಎಂದು ಕುಮಾರ್ ಅವರು 2020 ರಲ್ಲಿ ತಮ್ಮ ದೂರಿನಲ್ಲಿ ಆರೋಪಿಸಿದ್ದರು.

"ಏಕ್ತಾ ಕಪೂರ್ ಅವರ ಬಾಲಾಜಿ ಟೆಲಿಫಿಲ್ಮ್ಸ್ ಲಿಮಿಟೆಡ್ ಒಡೆತನದ ಒಟಿಟಿ ಪ್ಲಾಟ್‌ಫಾರ್ಮ್ ಆಲ್ಟ್‌ ಬಾಲಾಜಿಯಲ್ಲಿ ಈ ಸರಣಿಯನ್ನು ಪ್ರಸಾರ ಮಾಡಲಾಗಿದೆ." ಎಂದು ಶಂಭು ಕುಮಾರ್ ಅವರ ವಕೀಲ ಹೃಷಿಕೇಶ್ ಪಾಠಕ್ ಹೇಳಿದ್ದಾರೆ.

“ನ್ಯಾಯಾಲಯವು ಅವರಿಗೆ (ಕಪೂರ್‌ಗಳಿಗೆ) ಸಮನ್ಸ್ ಜಾರಿ ಮಾಡಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ತನ್ನ ಮುಂದೆ ಹಾಜರಾಗುವಂತೆ ಹೇಳಿತ್ತು. ಆಕ್ಷೇಪಣೆಯ ನಂತರ ಸರಣಿಯಲ್ಲಿನ ಕೆಲವು ದೃಶ್ಯಗಳನ್ನು ತೆಗೆದುಹಾಕಲಾಗಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಆದರೆ ಅವರು ನ್ಯಾಯಾಲಯದ ಮುಂದೆ ಹಾಜರಾಗಿರಲಿಲ್ಲ, ಹಾಗಾಗಿ ಅವರ ವಿರುದ್ಧ ವಾರಂಟ್ ಹೊರಡಿಸಲಾಯಿತು,” ಎಂದು ಪಾಠಕ್ ಹೇಳಿದ್ದಾರೆ.

ಇದನ್ನೂ ಓದಿ: ಪಿಎಫ್‌ಐ ಗೂ ಮುನ್ನ ಆರೆಸ್ಸೆಸ್ ಅನ್ನು ನಿಷೇಧಿಸಬೇಕಿತ್ತು: ಲಾಲು ಪ್ರಸಾದ್ ಯಾದವ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News