ದೇಶದ ರಾಷ್ಟ್ರೀಯ ಏಕತೆ, ಸಮಗ್ರತೆಗೆ ಬೆದರಿಕೆ ಒಡ್ಡುವವರು ಸ್ವೀಕಾರಾರ್ಹರಲ್ಲ: ಆದಿತ್ಯನಾಥ್
Update: 2022-09-28 23:04 IST
ಲಕ್ನೋ, ಸೆ. 28: ನವ ಭಾರತದಲ್ಲಿ ದೇಶದ ರಾಷ್ಟ್ರೀಯ ಏಕತೆ ಹಾಗೂ ಸಮಗ್ರತೆಗೆ ಬೆದರಿಕೆ ಒಡ್ಡುವವರನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಬುಧವಾರ ಹೇಳಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಆದಿತ್ಯನಾಥ್, ‘‘ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳ ಮೇಲೆ ವಿಧಿಸಿದ ನಿಷೇಧ ಶ್ಲಾಘನೀಯ ಹಾಗೂ ಸ್ವಾಗತಾರ್ಹ’’ ಎಂದಿದ್ದಾರೆ.
‘‘ಈ ನವ ಭಾರತದಲ್ಲಿ ದೇಶದ ಏಕತೆ, ಸಮಗ್ರತೆ ಹಾಗೂ ಭದ್ರತೆಗೆ ಧಕ್ಕೆ ತರುವ ವ್ಯಕ್ತಿಗಳು, ಭಯೋತ್ಪಾದಕರು ಹಾಗೂ ಕ್ರಿಮಿನಲ್‌ಗಳು ಸ್ವೀಕಾರಾರ್ಹರಲ್ಲ’’ ಎಂದು ಅವರು ಹೇಳಿದ್ದಾರೆ.