ಆರೋಪಿಗಳ ಚುನಾವಣೆ ಸ್ಪರ್ಧೆ ಬಹಿಷ್ಕಾರಕ್ಕೆ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

Update: 2022-09-28 17:55 GMT

ಹೊಸದಿಲ್ಲಿ, ಸೆ. 28: ಗಂಭೀರ ಅಪರಾಧದ ಆರೋಪ ಎದುರಿಸುತ್ತಿರುವ ವ್ಯಕ್ತಿಗಳು ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ಬಹಿಷ್ಕರಿಸುವಂತೆ ಕೋರಿ ಸಲ್ಲಿಸಿದ ಮನವಿ ಕುರಿತಂತೆ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರಕಾರ ಹಾಗೂ ಚುನಾವಣಾ ಆಯೋಗದ ಪ್ರತಿಕ್ರಿಯೆ ಕೋರಿದೆ.

ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಹಾಗೂ ಹರಿಕೃಷ್ಣ ರಾಯ್ ಅವರನ್ನು ಒಳಗೊಂಡ ಪೀಠ ಕಾನೂನು ಹಾಗೂ ನ್ಯಾಯ ಸಚಿವಾಲಯ, ಗೃಹ ಸಚಿವಾಲಯ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸು ಜಾರಿ ಮಾಡಿದೆ.

ಈ ವಿಷಯದ ಕುರಿತು ನ್ಯಾಯವಾದಿ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News