ಭೂತಾನ್ ಅಡಿಕೆ ಆಮದಿಗೆ ಬೆಳೆಗಾರರು ಆತಂಕ ಪಡಬೇಕಾಗಿಲ್ಲ: ಕೊಡ್ಗಿ

Update: 2022-09-29 14:55 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಸೆ.29: ಕೇಂದ್ರ ಸರಕಾರ ಭೂತನ್‌ನಿಂದ 17,000 ಟನ್ ಹಸಿ ಅಡಿಕೆ ಆಮದಿಗೆ ಅನುಮತಿ ನೀಡಿರುವ ಬಗ್ಗೆ ಬೆಳೆಗಾರರು ಆತಂಕ ಪಡಬೇಕಾಗಿಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭೂತಾನ್‌ನಿಂದ ಅಡಿಕೆ ಆಮದಿನಿಂದ ಕರ್ನಾಟಕ ಮತ್ತು ಕೇರಳ ರಾಜ್ಯದ ಅಡಿಕೆ ಬೆಳೆಗಾರರು ಆತಂಕ ಪಡುವ ಅಗತ್ಯ ಇಲ್ಲ. ಇದು ನಮ್ಮಲ್ಲಿನ ಅಡಿಕೆಯ ದರದ ಸ್ಥಿರತೆಗೆ ಯಾವುದೇ ಪರಿಣಾಮ ಉಂಟುಮಾಡುವುದಿಲ್ಲ. ಇದರಿಂದ ದೇಶೀಯ ಗುಣಮಟ್ಟದ ಚಾಲಿಗೆ ಯಾವುದೇ ತೊಂದರೆಯೂ ಇಲ್ಲ ಎಂದಿದ್ದಾರೆ.

ಆದಾಗ್ಯೂ ಕೇಂದ್ರ ಸರಕಾರವು ಹೊರಡಿಸಿರುವ ಅಧಿಸೂಚನೆಗೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತಿತರ ಸಂಬಂಧಪಟ್ಟ ಅಧಿಕಾರಿಗಳಿಗೆ ವಿರೋಧ ವ್ಯಕ್ತಪಡಿಸಿ ಕ್ಯಾಂಪ್ಕೋ ಪತ್ರ ಬರೆದಿದೆ.

ಆಮದಾಗುವ ಚಾಲಿ ಅಡಿಕೆಗೆ ಕೆಜಿಗೆ 360 ರೂ. ಕನಿಷ್ಠ ಆಮದು ಬೆಲೆ ನಿಗದಿ ಪಡಿಸುವಂತೆ ಕ್ಯಾಂಪ್ಕೊ ದೆಹಲಿ ನಿಯೋಗದ ಮೂಲಕ ಈಗಾಗಲೇ ಕೇಂದ್ರ ಸರಕಾರವನ್ನು ಒತ್ತಾಯಿಸಿದೆ. ಈ ಅಸೂಚನೆಯ ಅನುಷ್ಠಾನದಿಂದ ದೇಶೀಯ ಮಾರುಕಟ್ಟೆಗೆ ಯಾವುದೇ ತೊಂದರೆ ಇಲ್ಲದಿದ್ದರೂ ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷೆಯಂತೆ ರೈತರ ಆದಾಯ ದ್ವಿಗುಣಗೊಳಿಸುವ ಕೇಂದ್ರದ ಸಮಗ್ರ ನೀತಿಗೆ ವ್ಯತಿರಿಕ್ತ ಪರಿಣಾಮ ಬೀರುವ ಬಗ್ಗೆ ಸಚಿವರಿಗೆ ಕ್ಯಾಂಪ್ಕೋ ತನ್ನ ಆತಂಕ ವ್ಯಕ್ತಪಡಿಸಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News