​ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

Update: 2022-09-29 16:05 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.29: ಹದಿನಾಲ್ಕು ವರ್ಷದ ಅಪ್ರಾಪ್ತ ಬಾಲಕಿಗೆ ಹಣದ ಆಮಿಷಯೊಡ್ಡಿ ಅತ್ಯಾಚಾರವೆಸಗಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿಗೆ ಹೈಕೋರ್ಟ್, ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ.    

ಪ್ರಕರಣ ಕುರಿತು ಚಿಕ್ಕಬಳ್ಳಾಪುರ ಜಿಲ್ಲೆಯ ಬಶೀರ್(44) ಎನ್ನುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ. 

ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಬಶೀರ್ ವಿರುದ್ಧ ಪೋಕ್ಸೊ ಮತ್ತು ಎಸ್ಸಿ-ಎಸ್ಟಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಬಂಧಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News