ಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೇಮಕಾತಿ

Update: 2022-09-29 16:19 GMT

ಸುಳ್ಯ: ಕೊಲೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರವೀಣ್ ಅವರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಇದೀಗ ನೇಮಕಾತಿ ಮಾಡಿ ಸರಕಾರ ಆದೇಶ ನೀಡಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News