4 ಸಾವಿರ ಅಂಗನವಾಡಿಗಳ ನಿರ್ಮಾಣಕ್ಕೆ ಕ್ರಮ: ಸಿಎಂ ಬೊಮ್ಮಾಯಿ

Update: 2022-09-29 17:12 GMT

ಹಾವೇರಿ, ಸೆ. 29:‘ರಾಜ್ಯ ಸರಕಾರ ನಾಲ್ಕು ಸಾವಿರ ಅಂಗನವಾಡಿಗಳನ್ನು ಹೆಚ್ಚುವರಿಯಾಗಿ ನಿರ್ಮಿಸಲು ಅನುದಾನ ಬಿಡುಗಡೆ ಮಾಡಲಾಗಿದ್ದು, ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಗುರುವಾರಜಿಲ್ಲೆಯ ಸವಣೂರಿನ ಹಾವಣಗಿ ಪ್ಲಾಟ್ ಬಳಿ ವೇದಾಂತ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ  ಅಂಗನವಾಡಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ‘ಶಿಗ್ಗಾಂವಿ ಕ್ಷೇತ್ರದಲ್ಲಿ ಸ್ಥಳ ಲಭ್ಯವಿರುವ ಕಡೆಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಇನ್ನು ಆರು ತಿಂಗಳಲ್ಲಿ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಕೇಂದ್ರ ಸಚಿವರ ಮುತುವರ್ಜಿಯಿಂದ ಈ ಕ್ಷೇತ್ರದಲ್ಲಿ 50ಕ್ಕಿಂತ ಹೆಚ್ಚು ಅಂಗನವಾಡಿಗಳನ್ನು ನಿರ್ಮಿಸುತ್ತಿದ್ದಾರೆ.  ಶಿಗ್ಗಾಂವ್, ಸವಣೂರು, ಬಂಕಾಪುರಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಬೇಕೆಂದು ಕೋರಲಾಗಿದೆ. ಬಡವರಿರುವ ಈ ಪ್ರದೇಶಗಳಲ್ಲಿ ರಸ್ತೆ, ಚರಂಡಿ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ 20ಕೋಟಿ ರೂ.ಈಗಾಗಲೇ ನೀಡಲಾಗಿದ್ದು, ಮೂಲಸೌಕರ್ಯಗಳ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಬೇಕು ಎಂದು ಅವರು ಸೂಚನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News