'ಭಾರತ್ ಜೋಡೋ ಯಾತ್ರೆ': ರಾಹುಲ್ ಗಾಂಧಿಯನ್ನು ಬರಮಾಡಿಕೊಂಡ ಸಿದ್ದರಾಮಯ್ಯ

Update: 2022-09-30 04:04 GMT

ಗುಂಡ್ಲುಪೇಟೆ, ಸೆ.30: 'ಭಾರತ್ ಜೋಡೋ ಯಾತ್ರೆ' ಹಿನ್ನೆಲೆಯಲ್ಲಿ ಇಂದು ರಾಜ್ಯ ಪ್ರವೇಶಿಸಿದ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರನ್ನು ಬಂಡೀಪುರದ ಬಳಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಮಾಡಿಕೊಂಡರು.

ಈ ವೇಳೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ್, ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ. ಮಹಾದೇವಪ್ಪ, ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಮೂರು ವರ್ಷದ ಮಗುವಿಗೆ ನೇಣು ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ!

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News