ಭೂತಾನ್ ನಿಂದ ಅಡಿಕೆ ಆಮದು | ಬೆಳಗಾರರಿಗೆ ಆತಂಕ ಬೇಡ ಎಂದ ಗೃಹಸಚಿವ ಆರಗ ಜ್ಞಾನೇಂದ್ರ

Update: 2022-09-30 07:00 GMT

ಬೆಂಗಳೂರು, ಸೆ.30: ನೆರೆಯ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರ ಸರಕಾರದ ನಿರ್ಧಾರವು ದೇಶೀಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ. ಆದ್ದರಿಂದ ಬೆಳೆಗಾರರು ಆತಂಕಪಡಬೇಕಾಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸಕ್ತ  ನಮ್ಮದೇಶದಿಂದ ಭೂತಾನ್ ಗೆ, ಸಂಸ್ಕರಿತ ಅಡಿಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಿಕೆಗೆ ಮಾತ್ರ ಅನುಮತಿ ನೀಡಲಾಗಿದೆ ಎಂದರು.

ರಾಜ್ಯ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಸಚಿವರು, ಅಡಿಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದುಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕದಲ್ಲಿದ್ದು, ಭೂತಾನ್ ಅಡಿಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು,  ಬೆಳೆಗಾರರಿಗೆ, ಯಾವುದೇ ಗೊಂದಲ ಆತಂಕ ಬೇಡ, ಎಂದು ಸಚಿವರು, ಅಭಯ ನೀಡಿದ್ದಾರೆ.

ಈ ವಿಚಾರ ಕುರಿತು, ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು, ಲೋಕಸಭಾ ಸದಸ್ಯರ ನೇತೃತ್ವದಲ್ಲಿ, ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದೂ ಸಚಿವರು ಹೇಳಿದರು.

ಇದನ್ನೂ ಓದಿ: ಜನರ ಪರ ಮಾತನಾಡಲು ಪಾದಯಾತ್ರೆಯಲ್ಲದೆ ಅನ್ಯ ಮಾರ್ಗವೇ ಇಲ್ಲ: ರಾಹುಲ್ ಗಾಂಧಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News