ಅ.3ರಂದು ಬ್ಯಾರಿ ಭಾಷಾ ದಿನಾಚರಣೆ, ಬ್ಯಾರಿ ವಚನಮಾಲೆ ಪುಸ್ತಕ ಬಿಡುಗಡೆ

Update: 2022-09-30 10:07 GMT

ಮಂಗಳೂರು, ಸೆ.30: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ಸಹಯೋಗದಲ್ಲಿ ಅ.3ರಂದು ಅಪರಾಹ್ನ 3 ಗಂಟೆಗೆ 'ಬ್ಯಾರಿ ಭಾಷಾ ದಿನಾಚರಣೆ ಹಾಗೂ ಬ್ಯಾರಿ ವಚನಮಾಲೆ ಪುಸ್ತಕ ಬಿಡುಗಡೆ ಸಮಾರಂಭವನ್ನು ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಡಾ.ಶಿವರಾಮ ಕಾರಂತ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಆಡಳಿತಾಧಿಕಾರಿ ವಿ.ಎನ್.‌ಮಲ್ಲಿಕಾರ್ಜುನ ಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಜಾಲ್‌ ನ ಸ್ನೇಹ ಪಬ್ಲಿಕ್‌ ಸ್ಕೂಲ್‌ ಶಿಕ್ಷಕ, ಲೇಖಕ ಅಶೀರುದ್ದೀನ್‌ ಆಲಿಯಾ ರಚಿಸಿದ 'ಬ್ಯಾರಿ ವಚನಮಾಲೆ' ಕೃತಿಯನ್ನು ಸಾಹಿತಿ ಹಾಗೂ ಪತ್ರಕರ್ತ ಹಂಝ ಮಲಾರ್‌ ಬಿಡುಗಡೆ ಮಾಡುವರು. ಬಂಟ್ವಾಳ ಬಿ. ಮೂಡ ಸ.ಪ.ಪೂ, ಕಾಲೇಜಿನ ಉಪನ್ಯಾಸಕ ಅಬ್ದುಲ್‌ ರಝಾಕ್‌ ಅನಂತಾಡಿ ಬ್ಯಾರಿ ಭಾಷಾ ದಿನಾಚರಣೆಯ ಉಪನ್ಯಾಸ ನೀಡಲಿದ್ದಾರೆ.

ಇದೇ ಸಂದರ್ಭದಲ್ಲಿ ಬೆಲ್ಕಿರಿ ದ್ವೈಮಾಸಿಕ ಸಂಚಿಕೆ ಬಿಡುಗಡೆಗೊಳ್ಳಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ.ಅಬೂಬಕರ್‌ ಸಿದ್ದೀಕ್‌ ಮತ್ತು ಅಕಾಡಮಿಯ ಸದಸ್ಯ ಶಂಶೀರ್‌ ಬುಡೋಳಿ ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅಕಾಡಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News