ಜನಪರ ಕೆಲಸ ಮಾಡದಿದ್ದರೆ ಪಕ್ಷ ವಿಸರ್ಜನೆ: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ

Update: 2022-09-30 13:00 GMT

ರಾಯಚೂರು, ಸೆ. 30: ‘ನಾವು ಜನಪರ ಕೆಲಸ ಮಾಡದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತೇವೆಂದು ಜನತೆಗೆ ವಾಗ್ದಾನ ನೀಡುತ್ತಿದ್ದೇವೆ. ಇದುವರೆಗೂ ಯಾವುದೇ ರಾಜಕೀಯ ಪಕ್ಷ ಈ ರೀತಿಯ ವಾಗ್ದಾನ ಮಾಡಿಲ್ಲ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ ಇಂದಿಲ್ಲಿ ತಿಳಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಹಾಗೂಬಿಜೆಪಿ ಮಧ್ಯೆ ಪೈಪೋಟಿ ನಡೆಯುತ್ತಿದೆ. ಈ ಎರಡು ಪಕ್ಷಗಳಿಗಿಂತ ವಿಭಿನ್ನವಾಗಿ ಜೆಡಿಎಸ್ ಮುಂದೆ ಸಾಗುತ್ತಿದೆ. ರಾಜ್ಯದಲ್ಲಿ ಪಂಚ ರತ್ನ ಯೋಜನೆ ಜಾರಿಗೆ ತರುತ್ತೇವೆ. ಭಯ, ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ಸಂಕಲ್ಪ ಹೊಂದಿದ್ದೇವೆ' ಎಂದು ಸ್ಪಷ್ಟಪಡಿಸಿದರು.

‘ರಾಜ್ಯದ ರೈತರ ಹಿತದೃಷ್ಟಿಯಿಂದ ನೆನೆಗುದಿಗೆ ಬಿದ್ದಿರುವ ಹಾಗೂ ಜಾರಿಯಲ್ಲಿರುವ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುತ್ತೇನೆ' ಎಂದು ಅವರು, ‘ನಮಗೆ ಯಾವುದೇ ಹೈಕಮಾಂಡ್ ಇಲ್ಲ, ತಮಾಷೆ ಮಾಡುವುದು ನಮ್ಮಲ್ಲಿ ಇಲ್ಲ. ‘ಭಾರತ್ ಜೋಡೋ' ಅಲ್ಲ ಮೊದಲು ಕಾಂಗ್ರೆಸ್ ಜೋಡೋ ಕೆಲಸ ಮಾಡಲಿ' ಎಂದು ತಿರುಗೇಟು ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News