ಅ.3ರಿಂದ ಹೈಕೋರ್ಟ್ ಗೆ 5 ದಿನಗಳ ದಸರಾ ರಜೆ

Update: 2022-09-30 14:05 GMT

ಬೆಂಗಳೂರು, ಸೆ.30: ರಾಜ್ಯ ಹೈಕೋರ್ಟ್‍ಗೆ ಅ.3ರಿಂದ 7ರವರೆಗೆ ದಸರಾ ರಜೆ ಇರಲಿದೆ. ಧಾರವಾಡ ಮತ್ತು ಕಲಬುರಗಿ ಪೀಠದಲ್ಲಿ ಭೌತಿಕ ವಿಚಾರಣೆ ಇರುವುದಿಲ್ಲ. ತುರ್ತು ಪ್ರಕರಣಗಳ ವಿಚಾರಣೆಯನ್ನು ಬೆಂಗಳೂರಿನ ಪ್ರಧಾನ ಪೀಠದಲ್ಲಿ ವರ್ಚುವಲ್ ವಿಧಾನದಲ್ಲಿ ನಡೆಸಲಾಗುತ್ತದೆ.

ರಜಾ ಕಾಲದಲ್ಲಿ ನ್ಯಾಯಮೂರ್ತಿಗಳಾದ ಎಸ್.ಸುನೀಲ್ ದತ್ ಯಾದವ್ ಮತ್ತು ಟಿ.ಜಿ. ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠವು 8ನೆ ಕೋರ್ಟ್ ಹಾಲ್‍ನಲ್ಲಿ ವಿಚಾರಣೆ ನಡೆಸಲಿದೆ. ಉಳಿದಂತೆ ನ್ಯಾಯಮೂರ್ತಿಗಳಾದ ಎನ್.ಎಸ್. ಸಂಜಯ್ ಗೌಡ (ಕೋರ್ಟ್ ಹಾಲ್ ಸಂಖ್ಯೆ 9), ಎಂ.ಜಿ.ಎಸ್ ಕಮಲ್ (ಕೋರ್ಟ್ ಹಾಲ್ ಸಂಖ್ಯೆ 10) ಮತ್ತು ಸಿ.ಎಂ.ಪೂಣಚ್ಚ ಅವರು (ಕೋರ್ಟ್ ಹಾಲ್ ನಂ.11)ಏಕಸದಸ್ಯ ಪೀಠಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ.

ಬೆಂಗಳೂರು ಪೀಠದಲ್ಲಿ ಹೈಬ್ರಿಡ್ ವಿಚಾರಣೆಗೆ ಅವಕಾಶ ಕಲ್ಪಿಸಲಾಗಿದೆ. ತುರ್ತು ಮಧ್ಯಂತರ ಆದೇಶ, ತಡೆಯಾಜ್ಞೆ ಮತ್ತು ಮಧ್ಯಂತರ ನಿರ್ದೇಶನಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ಮಾತ್ರ ನಡೆಸಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಅ.3ರಂದು ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಪೀಠದಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ದಾಖಲು ಮಾಡಬಹುದಾಗಿದೆ. ಇ-ಫೈಲಿಂಗ್ ಪೋರ್ಟಲ್ ಮೂಲಕವು ಅರ್ಜಿ ದಾಖಲಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಪ್ರಭಾರಿ ನ್ಯಾಯಿಕ ರಿಜಿಸ್ಟ್ರಾರ್ ಕೆ.ಎಸ್.ಭರತ್‍ಕುಮಾರ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News