ಕಾಪುವಿನಲ್ಲಿ ಖಾದಿ ಮಾರಾಟ ಸ್ಟಾಲ್ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Update: 2022-09-30 14:16 GMT

ಕಾಪು: ಖಾದಿ ಬಟ್ಟೆಯನ್ನು ಖರೀದಿಸುವುದರಿಂದ ಉದ್ಯಮಕ್ಕೆ ಫ್ರೋತ್ಸಾಹ ಸಿಗುತ್ತದೆ. ಇದರಿಂದ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಪ್ರಯೋಜವಾಗುತ್ತದೆ ಎಂದು ಕೇಂದ್ರ ಸರಕಾರದ ಕೃಷಿ ಮತ್ತು ರೈತರ ಶ್ರೇಯೋಭವೃದ್ಧಿ ಇಲಾಖೆಯ ರಾಜ್ಯ ಸಚಿವೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟುದ ಪ್ರಯುಕ್ತ ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಕಾಪು ಪೇಟೆಯಲ್ಲಿ ನಡೆದ ಖಾದಿ ಮಾರಾಟ ಸ್ಟಾಲ್- ಖಾದಿ ಮೇಳ ಉದ್ಘಾಟಿಸಿ ಮಾತನಾಡಿದರು.

ಖಾದಿ ಸ್ವಾಭಿಮಾನದ ಸಂಕೇತವಾಗಿದೆ. ಇದು ಎಲ್ಲರ ಕರ್ತವ್ಯವೂ ಆಗಿದೆ. ದೇಶದ ಪ್ರಜೆಗಳು ವರ್ಷಕ್ಕೆ ಒಂದು ಜೋಡಿ ಖಾದಿ ಬಟ್ಟೆ ಖರೀದಿಸಿದರೆ 135 ಕೋಟಿ ಖರೀದಿಯಾಗುತ್ತದೆ. ಇಂತಹ ಕಾರ್ಯಕ್ರಮದಿಂದ ಖಾದಿಯನ್ನು ಕೊಂಡುಕೊಳ್ಳಲು ಪ್ರೇರಣೆ ನೀಡಿದಂತಾಗುತ್ತದೆ. ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಇಂದು ಸ್ವಾಲಂಬಿಯಾಗುವತ್ತ ಹೆಜ್ಜೆ ಹಾಕುತ್ತಿದ್ದು, ಮದ್ದುಗುಂಡುಗಳು, ರಸಗೊಬ್ಬರ ಸಹಿತ ಅಗತ್ಯ ವಸ್ತುಗಳ ಉತ್ಪಾದನೆಗೆ ಒತ್ತು ನೀಡುತ್ತಿದೆ ಎಂದರು. 

ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್, ಮೈಸೂರ್ ಇಲೆಕ್ಟ್ರಿಕಲ್ ಆಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷರುಗಳಾದ ಗೀತಾಂಜಲಿ ಸುವರ್ಣ, ಶ್ರೀಶ ನಾಯಕ್, ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ, ಜಿಲ್ಲಾ ಮಹಿಳಾ ಬಿಜೆಪಿ ಅಧ್ಯಕ್ಷೆ ವೀಣಾ ಶೆಟ್ಟಿ, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಮಾಜಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಖಾದಿ ಮೇಳದ ಸಂಚಾಲಕ ಅನಿಲ್ ಕುಮಾರ್, ಸಹ ಸಂಚಾಲಕ ರತ್ನಾಕರ ಶೆಟ್ಟಿ, ಕಾಪು ಮಹಿಳಾ ಮೋರ್ಚದ ಅಧ್ಯಕ್ಷೆ ಸುಮಾ ಉದಯ ಶೆಟ್ಟಿ, ಕಾಪು ನಗರ ಬಿಜೆಪಿ ಅಧ್ಯಕ್ಷ ಸಂದೀಪ್ ಶೆಟ್ಟಿ ಕಲ್ಯ ಪ್ರಮುಖರಾದ ಶಿಲ್ಪಾ ಸುವರ್ಣ, ಗಂಗಾಧರ ಸುವರ್ಣ, ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು,  ಕೇಸರಿ ಯುವರಾಜ್, ಪವಿತ್ರಾ ಶೆಟ್ಟಿ, ಅನಿಲ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕಾಂಗ್ರೆಸ್ ಮುಖಂಡ ಮಿಥುನ್ ರೈ ಉಡುಪಿಯಲ್ಲಿ ಕೇಂದ್ರ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಉಡುಪಿಗೆ ಬರುತಿಲ್ಲ. ಅವರೊಂದಿಗೆ ಸೆಲ್ಫಿ ಕಳುಹಿಸಿ ಬಹುಮಾನ ನೀಡುವುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸೆಡ್ಡು ಹೊಡೆದ ಬಿಜೆಪಿ ಕಾರ್ಯಕರ್ತರು ಕಾಪುವಿಗೆ ಶುಕ್ರವಾರ ಕಾರ್ಯಕ್ರಮಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಆಗಮಿಸಿದ ಸಂದರ್ಭ ಬಿಜೆಪಿ ಕಾರ್ಯಕರ್ತರು ಅವರೊಂದಿಗೆ ಸೆಲ್ಫಿಗೆ ಮುಗಿಬಿದ್ದರು.

ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಕಾಪು ಪೇಟೆಯಲ್ಲಿ ನಡೆದ ಖಾದಿ ಮಾರಾಟ ಸ್ಟಾಲ್- ಖಾದಿ ಮೇಳ ಉದ್ಘಾಟಿಸಿದ ಸಚಿವೆ ಶೋಭಾ ಕರಂದ್ಲಾಜೆ ತನಗೆ ಇಷ್ಟವಾದ ಎರಡು ಸೀರೆಯನ್ನು ಖರೀಸಿದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News