ನಾಡಗೀತೆ ಧಾಟಿ ವಿವಾದ: ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2022-09-30 16:42 GMT

ಬೆಂಗಳೂರು, ಸೆ.30: ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಹಾಡುವ ಧಾಟಿ ಹಾಗೂ ಕಾಲಮಿತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ತುರ್ತು ನೋಟಿಸ್ ಜಾರಿ ಮಾಡಿದೆ. 

ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ,  ಸರಕಾರಕ್ಕೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.

ನಾಡಗೀತೆಯನ್ನು ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ 2.30 ನಿಮಿಷಗಳಲ್ಲಿ ಹಾಡುವ ಬಗ್ಗೆ ಸೆ.25ರಂದು ರಾಜ್ಯ ಸರಕಾರ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News