ಭಾರತದಲ್ಲಿ 5G ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Update: 2022-10-01 05:37 GMT

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶದ ಆಯ್ದ ನಗರಗಳಲ್ಲಿ 5G ಸೇವೆಗಳಿಗೆ ಚಾಲನೆ ನೀಡಿದ್ದಾರೆ. ಮುಂದಿನ ಒಂದೆರಡು ವರ್ಷಗಳಲ್ಲಿ ಈ ಸೇವೆಯು  ಹಂತಹಂತವಾಗಿ ಇಡೀ ದೇಶಕ್ಕೆ ಲಭ್ಯವಾಗುವ ನಿರೀಕ್ಷೆಯಿದೆ.

ಹೊಸದಿಲ್ಲಿಯ ಪ್ರಗತಿ ಮೈದಾನದಲ್ಲಿ ಅಕ್ಟೋಬರ್ 1-4 ರಿಂದ ನಡೆಯಲಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್ 2022 ರ 6 ನೇ ಆವೃತ್ತಿಯಲ್ಲಿ ಪ್ರಧಾನ ಮಂತ್ರಿಯವರು ಬಹು ನಿರೀಕ್ಷಿತ ಸೇವೆಯನ್ನು ಆರಂಭಿಸಿದ್ದಾರೆ.

ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ವೇದಿಕೆ ಎಂದು ಹೇಳಿಕೊಳ್ಳುವ ಇಂಡಿಯಾ ಮೊಬೈಲ್ ಕಾಂಗ್ರೆಸ್ (IMC)ಅನ್ನು ದೂರಸಂಪರ್ಕ ಇಲಾಖೆ (DoT) ಹಾಗೂ  ಸೆಲ್ಯುಲರ್ ಆಪರೇಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (COAI) ಜಂಟಿಯಾಗಿ  ಆಯೋಜಿಸಿವೆ.

ಮುಕೇಶ್ ಅಂಬಾನಿ ಮಾಲಿಕತ್ವದ ಜಿಯೊ, ಸುನೀಲ್ ಭಾರ್ತಿ ಮಿತ್ತಲ್ ಮಾಲಿಕತ್ವದ ಭಾರ್ತಿ ಏರ್ ಟೆಲ್ ಹಾಗೂ ವೊಡಾಫೋನ್ ಐಡಿಯಾ ಕಂಪನಿಗಳು 5  ಜಿ ಸೇವೆಗಳನ್ನು ಆರಂಭಿಸಲು ಅಗತ್ಯವಿರುವ ತರಂಗಾಂತರಗಳನ್ನು  ಹರಾಜಿನ ಮೂಲಕ ಖರೀದಿಸಿವೆ. ಖಾಸಗಿ  ನೆಟ್ ವರ್ಕ್ ಸ್ಥಾಪಿಸಲು ಅಗತ್ಯವಿರುವ 5 ಜಿ ತರಂಗಾಂತರಗಳನ್ನುಅದಾನಿ ಸಮೂಹ ಖರೀದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News