ರಾಜ್ಯಸಭೆಯ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ

Update: 2022-10-01 07:21 GMT
ಮಲ್ಲಿಕಾರ್ಜುನ ಖರ್ಗೆ (Photo:PTI)

ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಹಿರಿಯ ನಾಯಕ  ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ರಾಜ್ಯಸಭೆಯ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿಸಂಸ್ಥೆ ANI ವರದಿ ಮಾಡಿದೆ.

ಖರ್ಗೆ ಅವರು  ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮ ಪತ್ರ ಕಳುಹಿಸಿದ್ದಾರೆ.

ಉದಯಪುರದಲ್ಲಿ ನಡೆದ ಚಿಂತನಾ ಶಿಬಿರದಲ್ಲಿ 'ಒಬ್ಬ ನಾಯಕನಿಗೆ ಒಂದು ಹುದ್ದೆ' ಎಂಬ ನಿರ್ಣಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಖರ್ಗೆ ಅವರು ರಾಜ್ಯಸಭೆಯ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಸ್ಪರ್ಧಿಸಲಿದ್ದು, ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News