ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೇ ?: ರಾಹುಲ್‌ಗೆ ಬಿಜೆಪಿ ಪ್ರಶ್ನೆ

Update: 2022-10-01 08:20 GMT

ಬೆಂಗಳೂರು: ರಾಜ್ಯದಲ್ಲಿ 2ನೇ ದಿನಕ್ಕೆ ಕಾಲಿಟ್ಟಿರುವ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ವಿರುದ್ಧ ಬಿಜೆಪಿ ಟೀಕಾಪ್ರಹಾರ ನಡೆಸಿದೆ. 

ಶನಿವಾರ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೇ ? ರಾಹುಲ್ ಗಾಂಧಿ ಯಾತ್ರೆ ಹಿಂದೂ ವಿರೋಧಿ ಯಾತ್ರೆಯಾಗಿ ಬದಲಾಗುತ್ತಿದೆ ಎಂದು ಆರೋಪಿಸಿದೆ.  

''ತಮಿಳುನಾಡು, ಕೇರಳದಲ್ಲಿ ತೋರಿದ ಹಿಂದೂ ದ್ವೇಷವನ್ನು ರಾಹುಲ್ ಗಾಂಧಿ ಕರ್ನಾಟಕದಲ್ಲೂ ಬಿಡಲಿಲ್ಲ. ಮತಾಂಧರ ಮೂಲಕ ಡಿಜೆ ಹಳ್ಳಿಯ ಹಿಂದೂಗಳ ಮನೆಗೆ ಬೆಂಕಿಹಚ್ಚಲು ಪ್ರಚೋದನೆ ನೀಡಿದ ಸಂಪತ್‌ ರಾಜ್‌ ಯಾತ್ರೆಯಲ್ಲಿ ರಾಹುಲ್‌ ಜೊತೆ ಹೆಜ್ಜೆ ಹಾಕಿದ್ದಾನೆ. ಕಾಂಗ್ರೆಸ್ಸಿಗರೇ, ಯಾತ್ರೆಯ ಹೆಸರನ್ನು #HinduVirodhiYatra ಎಂದು ಬದಲಾಯಿಸಿಕೊಳ್ಳುವಿರಾ?'' ಎಂದು ಕಿಡಿಕಾರಿದೆ. 

'ರಾಹುಲ್ ಗಾಂಧಿ ಯಾತ್ರೆ ಹಿಂದೂ ವಿರೋಧಿ ಯಾತ್ರೆಯಾಗಿ ಬದಲಾಗುತ್ತಿದೆ. ತಮಿಳುನಾಡಿನಿಂದ ಆರಂಭಗೊಂಡ ಯಾತ್ರೆ ಹೆಜ್ಜೆ ಹೆಜ್ಜೆಗೂ ಹಿಂದೂಗಳನ್ನು ಅವಮಾನಿಸುತ್ತಿದೆ. ಹಿಂದೂ ಸಮಾಜವನ್ನು ಕೆಣಕಿ ನಿಮ್ಮ ಮತಬ್ಯಾಂಕ್‌ ಗಟ್ಟಿಗೊಳಿಸುವ ಹುನ್ನಾರವೇ ಇದು?' ಎಂದು ಬಿಜೆಪಿ ಪ್ರಶ್ನೆ ಮಾಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News