ಪುತ್ತೂರು: ಡಾ.ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ಹಿರಿಯ ರಂಗಕರ್ಮಿ ಅಕ್ಷರ ಕೆ.ವಿ.ಆಯ್ಕೆ
Update: 2022-10-01 17:17 IST
ಪುತ್ತೂರು: ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ರಂಗಕರ್ಮಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹೆಗ್ಗೋಡಿನ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ ಎಂದು ಬಾಲವನ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾದ ಶಾಸಕ ಸಂಜೀವ ಮಠಂದೂರು ಮತ್ತು ಆಯ್ಕೆ ಸಮಿತಿಯ ಪದನಿಮಿತ್ತ ಕಾರ್ಯದರ್ಶಿಗಳಾದ ಸಹಾಯಕ ಆಯುಕ್ತ ಗಿರೀಶ್ ನಂದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ.10ರಂದು ಪುತ್ತೂರಿನ ಪರ್ಲಡ್ಕದಲ್ಲಿರುವ ಡಾ.ಶಿವರಾಮ ಕಾರಂತರ ಬಾಲವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.