'PayCM' ಟೀ ಶರ್ಟ್ ಧರಿಸಿದ್ದ ವ್ಯಕ್ತಿಗೆ ಹಲ್ಲೆ: ಯಥಾ ಮುಖ್ಯಮಂತ್ರಿ, ತಥಾ‌ ಪೊಲೀಸ್ ಎಂದ ಸಿದ್ದರಾಮಯ್ಯ

Update: 2022-10-01 14:15 GMT

ಬೆಂಗಳೂರು: ಭಾರತ್ ಜೋಡೊ ಯಾತ್ರೆಯಲ್ಲಿ 'PayCM'  ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆಯನ್ನು ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, #PayCM ಟೀ ಶರ್ಟ್ ಧರಿಸಿದ್ದ ನಮ್ಮ ಪಕ್ಷದ ಕಾರ್ಯಕರ್ತನ ಮೇಲೆ ಬೀದಿ ಗೂಂಡಾನಂತೆ ಹಲ್ಲೆಗೈದ ಪೊಲೀಸ್ ಅಧಿಕಾರಿಯ ಕೃತ್ಯ ಖಂಡನೀಯ. ಈ‌ ಪುಂಡ ಪೋಲಿಸನನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ. 

'ಯಥಾ ಮುಖ್ಯಮಂತ್ರಿ, ತಥಾ‌ ಪೊಲೀಸ್. ಕರ್ನಾಟಕದಲ್ಲಿ ಯುಪಿ ಮಾದರಿ ಆಡಳಿತ ತರುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ
ಹೇಳಿದ್ದರು. ಪೊಲೀಸರು ಅದನ್ನು ಅನುಷ್ಠಾನಗೊಳಿಸಲು ಹೊರಟಂತಿದೆ' ಎಂದು ಕಿಡಿಕಾರಿದ್ದಾರೆ.

''#40PercentCommission ಭ್ರಷ್ಟಾಚಾರದ ವಿರುದ್ಧದ ನಮ್ಮ ಪಕ್ಷದ ಅಭಿಯಾನವನ್ನು ಎದುರಿಸುವ ಧಮ್ಮು-ತಾಕತ್ ಬಿಜೆಪಿ
ಪಕ್ಷಕ್ಕೆ ಇಲ್ಲ. ರಾಜಕೀಯವಾಗಿ ನಮ್ಮನ್ನು ಎದುರಿಸಲಾಗದೆ ಬಿಜೆಪಿ ಪೊಲೀಸರ ಮೂಲಕ ದಮನಿಸುವ ಹೇಡಿತನಕ್ಕೆ ಇಳಿದಿದೆ'' ಎಂದು ಸಿದ್ದರಾಮಯ್ಯ ಆಕ್ರೋಸ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News