ಐದು ಆಟಗಳನ್ನು ಅಧಿಕೃತ ಗ್ರಾಮೀಣ ಕ್ರೀಡೆಗಳೆಂದು ಗುರುತಿಸಲಾಗಿದೆ: ಮುಖ್ಯಮಂತ್ರಿ ಬೊಮ್ಮಾಯಿ

Update: 2022-10-01 15:26 GMT

ಬೆಂಗಳೂರು, ಅ. 1:‘ಕಂಬಳ, ಕಬಡ್ಡಿ, ಕೊಕ್ಕೊ, ಕುಸ್ತಿ ಹಾಗೂ ಎತ್ತಿನಗಾಡಿ ಓಟದ ಸ್ಪರ್ಧೆಗಳನ್ನು ಅಧಿಕೃತವಾಗಿ ಗ್ರಾಮೀಣ ಕ್ರೀಡೆಗಳೆಂದು ಗುರುತಿಸಲಾಗಿದ್ದು, ಅವುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ಬಿಜೆಪಿ ರೈತ ಮೋರ್ಚಾ ಬೆಂಗಳೂರು ಉತ್ತರ ಜಿಲ್ಲೆ ವತಿಯಿಂದ ಪ್ರಧಾನಿ ಮೋದಿಹುಟ್ಟುಹಬ್ಬದ ಪ್ರಯುಕ್ತ ಚಂದ್ರಶೇಖರ್ ಅಜಾದ್ ಆಟದ ಮೈದಾನ ಏರ್ಪಡಿದಿದ್ದ ಕಬಡ್ಡಿ ಪಂದ್ಯಾವಳಿ ‘ನಮೋ ಕಿಸಾನ್ ಕಪ್' ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ‘ಕ್ರೀಡೆಯಿಂದ ದೇಹದ ಆರೋಗ್ಯ ಚೆನ್ನಾಗಿರುತ್ತದೆ. ಜೊತೆಗೆ ಶಿಸ್ತು ಬೆಳೆಯುತ್ತದೆ' ಎಂದು ನುಡಿದರು.

‘ದೇಶದ ಅಭಿವೃದ್ಧಿಗೆ ಕಾರಣಕರ್ತ ಮತ್ತು ಸದಾ ಸ್ಪೂರ್ತಿಯಾಗಿರುವ ಪ್ರಧಾನಿ ಮೋದಿ ಅವರ ಜನ್ಮದಿನದ ಅಂಗವಾಗಿ ರೈತ ಮೋರ್ಚಾವು ಗ್ರಾಮೀಣ ಕ್ರೀಡೆಗೆ ಪೆÇ್ರೀತ್ಸಾಹ ಕೊಡುತ್ತಿರುವುದು ಶ್ಲಾಘನಾರ್ಹ. ಮೋದಿಯವರ ಯೋಜನೆಗಳು ಸದಾ ಮಾದರಿ ಮತ್ತು ಜನಪರವಾಗಿರುತ್ತವೆ. ಮಹಿಳೆಯರಿಗೂ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿದ್ದಾರೆ' ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಆದಾಯ ದ್ವಿಗುಣ: ‘ರೈತರ ಬದುಕಿನಲ್ಲಿ ಒಳ್ಳೆಯ ದಿನಗಳು ಬರಬೇಕು ಮತ್ತು ರೈತರ ಆದಾಯ ದ್ವಿಗುಣಗೊಳಿಸಬೇಕೆಂದು ಸ್ವಾತಂತ್ರ್ಯಾನಂತರ ಸಂಕಲ್ಪ ಮಾಡಿದ ಮೊದಲ ಪ್ರಧಾನಿ ಮೋದಿ. ರೈತರ ಬದುಕನ್ನು ಹಸನು ಮಾಡಬೇಕು. ಅವರ ಉತ್ಪನ್ನಗಳಿಗೆ ಲಾಭ ಸಿಗುವಂತಾಗಬೇಕು ಎಂದು ಉದಾತ್ತ ಕಲ್ಪನೆಯಿಂದ ಮೋದಿಜಿ ಅವರು ಮುಂದುವರಿದಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾದ ಈರಣ್ಣ ಕಡಾಡಿ ತಿಳಿಸಿದರು.

ಸಂಸದ ಡಿ.ವಿ.ಸದಾನಂದ ಗೌಡ, ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಸಚಿವರಾದ ಹಾಲಪ್ಪ ಆಚಾರ್, ಶಂಕರ ಪಾಟೀಲ್ ಮುನೇನಕೊಪ್ಪ, ಉತ್ತರ ಜಿಲ್ಲಾಧ್ಯಕ್ಷ ಬಿ.ನಾರಾಯಣಗೌಡ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಉಪಾಧ್ಯಕ್ಷ ಲೋಕೇಶ್ ಗೌಡ, ರೈತ ಮೋರ್ಚಾ ಅಧ್ಯಕ್ಷ ಸತೀಶ್ ಕಡತನಮಲೆ, ಮಂಡಳಿ ಅಧ್ಯಕ್ಷ ಮುನಿಕೃಷ್ಣ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಆಶಾ ರಾವ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News