×
Ad

ಅ. 2 ರಂದು ಕ್ಲೀನ್ ಇಂಡಿಯಾ ಅಭಿಯಾನಕ್ಕೆ ಚಾಲನೆ

Update: 2022-10-01 21:29 IST

ಉಡುಪಿ, ಅ.1: ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಪಂ, ನಗರಸಭೆ, ಎನ್ನೆಸ್ಸೆಸ್, ಎನ್‌ಸಿಸಿ, ಸ್ಕೌಟ್ಸ್ ಅ್ಯಂಡ್ ಗೈಡ್ಸ್, ರೋವರ್ಸ್‌ ಅ್ಯಂಡ್ ರೇಂಜರ್ಸ್‌ ಹಾಗೂ ಇತರೆ ಸಂಘ-ಸಂಸ್ಥೆಗಳ  ಸಹಯೋಗದೊಂದಿಗೆ ಅಕ್ಟೋಬರ್ 1ರಿಂದ 31ರವರೆಗೆ  ನಡೆಯಲಿರುವ ಜಿಲ್ಲಾ ಮಟ್ಟದ ಕ್ಲೀನ್ ಇಂಡಿಯಾ ಅಭಿಯಾನಕ್ಕೆ ಅಕ್ಟೋಬರ್ 2 ರಂದು ಬೆಳಗ್ಗೆ 9 ಗಂಟೆಗೆ ನಗರದ ಭುಜಂಗ ಪಾರ್ಕ್ ಆವರಣದಲ್ಲಿ ಶಾಸಕ ಕೆ.ರಘುಪತಿ ಭಟ್ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರ ನಾಯಕ್, ಜಿಲ್ಲಾಧಿಕಾರಿ ಕೂರ್ಮರಾವ್ ಎಂ, ಪೌರಾಯುಕ್ತ ಡಾ.ಉದಯ್ ಶೆಟ್ಟಿ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ವಿಲ್ಫ್ರೆಡ್ ಡಿಸೋಜ ಮತ್ತಿತರರು ಭಾಗವಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News