ವಾರ್ತಾ ಇಲಾಖೆ ನಿರ್ಮಾಣದ ‘ಸಾಕ್ಷ್ಯಚಿತ್ರ'ಕ್ಕೆ ರಜತ ಕಮಲ: ಸಿಎಂ ಅಭಿನಂದನೆ

Update: 2022-10-01 18:21 GMT

ಬೆಂಗಳೂರು, ಅ. 1: ಆರವತ್ತೆಂಟನೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ್ದ ‘ನಾದದ ನವನೀತ ಡಾ. ಪಂಡಿತ್ ವೆಂಕಟೇಶ್ ಕುಮಾರ್'ಸಾಕ್ಷ್ಯಚಿತ್ರವು ರಜತ ಕಮಲ ಪ್ರಶಸ್ತಿಸ್ವೀಕರಿಸಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲಾಖೆಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಧಾರವಾಡದ ಅದ್ವಿತೀಯ ಹಿಂದುಸ್ತಾನಿ ಗಾಯಕರಾದ ಪಂಡಿತ್ ಎಂ.ವೆಂಕಟೇಶ್ ಕುಮಾರ್ ಅವರ ಬಗ್ಗೆ ಇಲಾಖೆಯು 2020ರಲ್ಲಿ ಸಾಕ್ಷ್ಯಚಿತ್ರವನ್ನು ನಿರ್ಮಿಸಿತ್ತು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಈ ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿದ್ದರು. ಇದು 68ನೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಚಲನಚಿತ್ರೇತರ ವಿಭಾಗದ ಕಲೆ ಮತ್ತು ಸಂಸ್ಕøತಿ ವಿಭಾಗದಲ್ಲಿ ರಜತ ಕಮಲ ಪ್ರಶಸ್ತಿಗೆ ಭಾಜನವಾಗಿದೆ. ಸೆ.30ರಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಾರ್ತಾ ಇಲಾಖೆಗೆ ರಜತ ಕಮಲ ಪ್ರಶಸ್ತಿ ಪ್ರದಾನ ಮಾಡಿದರು.

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪೈಕಿ ಕನ್ನಡದ ‘ಡೊಳ್ಳು' ಅತ್ಯುತ್ತಮ ಕನ್ನಡ ಚಲನಚಿತ್ರ ಮತ್ತು ಪರಿಸರಸಂರಕ್ಷಣೆ ವಿಭಾಗದಲ್ಲಿ‘ತಲೆದಂಡ'ಚಲನಚಿತ್ರವು ಅತ್ಯುತ್ತಮ ಪ್ರಶಸ್ತಿಯನ್ನು ಸೆ.30ರಂದು ನಡೆದ ಸಮಾರಂಭದಲ್ಲಿ ಸ್ವೀಕರಿಸಿದವು. ಅದೇ ರೀತಿ ವಾರ್ತಾ ಇಲಾಖೆಯು ನಾದದ ನವನೀತಸಾಕ್ಷ್ಯಚಿತ್ರವು ರಜತ ಕಮಲ ಪ್ರಶಸ್ತಿಯನ್ನು ಸ್ವೀಕರಿಸಿದೆ. ಈ ಎಲ್ಲಾ ಚಲನಚಿತ್ರ ಮತ್ತು ಸಾಕ್ಷ್ಯಚಿತ್ರಗಳ ನಿರ್ಮಾಣ ತಂಡಗಳ ಸಾಧನೆಯನ್ನು ಸಿಎಂ ಮುಕ್ತಕಂಠದಿಂದ ಅಭಿನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News